ಮಧುಬಂಗಾರಪ್ಪಗೆ ಜೆಡಿಎಸ್ ಅಧ್ಯಕ್ಷ ಪಟ್ಟ ಕೊಡತ್ತಾ ಜೆಡಿಎಸ್ ?

Date:

ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಮುಂದುವರೆಯುವಂತೆಶಾಸಕ ಎಚ್.ವಿಶ್ವನಾಥ್ ಅವರ ಮನ ಒಲಿಸುವ ಪ್ರಯತ್ನ ಮುಂದುವರೆದಿದ್ದು, ಒಂದು ವೇಳೆ ಅವರು ತಮ್ಮ ನಿಲುವು ಬದಲಿಸದಿದ್ದರೆ ಮಾಜಿ ಶಾಸಕ ಮಧುಬಂಗಾರಪ್ಪ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡುವ ಸಾಧ್ಯತೆಗಳಿವೆ.

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಶ್ವನಾಥ್ ಅವರ ಮನವೊಲಿಸಿ ಅದೇ ಸ್ಥಾನದಲ್ಲಿ ಮುಂದುವರೆಸುವ ಅಪೇಕ್ಷೆಯನ್ನು ಜೆಡಿಎಸ್ ವರಿಷ್ಠರು ಹೊಂದಿದ್ದಾರೆ. ಆದರೆ ಇದುವರೆಗೂ ವಿಶ್ವನಾಥ್‍ರವರು ತಮ್ಮ ನಿಲುವು ಬದಲಿಸಿಲ್ಲ ಹಾಗೂ ಇದುವರೆಗೂ ರಾಜೀನಾಮೆಯನ್ನು ಹಿಂಪಡೆದಿಲ್ಲ.

ವರಿಷ್ಠರ ಮನವೊಲಿಕೆಯ ನಂತರವೂ ವಿಶ್ವನಾಥ್ ತಮ್ಮ ನಿಲುವಿಗೆ ಅಂಟಿಕೊಂಡರೆ ರಾಜ್ಯಾಧ್ಯಕ್ಷ ಸ್ಥಾನವನ್ನು ಬೇರೆಯವರಿಗೆ ನೀಡುವ ನಿರ್ಧಾರ ಮಾಡಲಾಗುತ್ತದೆ.

ಈ ರಾಜೀನಾಮೆ ವಿಚಾರ ಇತ್ಯರ್ಥವಾಗುವವರೆಗೂ ಹೊಸಬರ ನೇಮಕದ ಪ್ರಸ್ತಾಪವಾಗುವುದಿಲ್ಲ ಎಂದು ಪಕ್ಷದ ಮೂಲಗಳು ಸ್ಪಷ್ಟಪಡಿಸಿವೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ವಿಶ್ವನಾಥ್ ಮನಸ್ಸು ಬದಲಿಸಿ ಮುಂದುವರೆಯುತ್ತಾರೆಂಬ ವಿಶ್ವಾಸದಲ್ಲಿದ್ದಾರೆ. ಇನ್ನು ಕೆಲವು ದಿನ ಕಾದು ನೋಡುವ ನಿರ್ಧಾರಕ್ಕೆ ವರಿಷ್ಠರು ಬಂದಿದ್ದಾರೆ.

ವಿಶ್ವನಾಥ್ ಅವರು ತಮ್ಮ ನಿಲುವಿಗೆ ಅಂಟಿಕೊಂಡಿದ್ದಾದರೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನವನ್ನು ಮಾಜಿ ಶಾಸಕ ಮಧುಬಂಗಾರಪ್ಪನವರಿಗೆ ನೀಡುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...