ಮನ್ರೇಗಾ ಹಣಕಾಸು ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ.. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ..? ಕೊನೆ ದಿನಾಂಕ‌ ಎಂದು..? ಇಲ್ಲಿದೆ ಮಾಹಿತಿ

Date:

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳ್ಳಿಸಲು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.‌ ಜಿಲ್ಲಾ ಪಂಚಾಯತ್, ತಾಲೂಕ ಪಂಚಾಯತ್ ಮತ್ತು ಗ್ರಾಮ ಪಂಚಾಯತ ಮಟ್ಟದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಆದಾಯ ತೆರಿಗೆ, ಪಾವತಿ ಮತ್ತು ಸರಕು ಮತ್ತು ಸೇವಾ ತೆರಿಗೆ ಪಾವತಿ, ರಾಜಧನ ಮತ್ತು ಪಾವತಿ, ವಾರ್ಷಿಕ ಲೆಕ್ಕ ಪತ್ರಗಳ ತಯಾರಿಕೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದಲ್ಲಿ ಹಣಕಾಸು ವ್ಯವಸ್ಥಾಪಕರನ್ನು  ಆಯ್ಕೆ ಮಾಡಲು ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ .

ಇದರಲ್ಲಿ ಆಸಕ್ತಿ ಉಳ್ಳವರು ಜುಲೈ, 27-2020 ರಿಂದ ಆಗಸ್ಟ್ 10-2020 ರ ವರೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಸಕ್ತರು ಅರ್ಜಿಗಳನ್ನು ಜಿಲ್ಲಾ ಪಂಚಾಯತ ಧಾರವಾಡ ವೆಬ್ ಸೈಟ್ http: //zpdharwad.Kar.nic.in ಮತ್ತು ಧಾರವಾಡ ಜಿಲ್ಲಾ ವೆಬ್ ಸೈಟ್ http://dharwad.nic.in ಮುಖಾಂತರ ಆನ್‍ಲೈನ್ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಎಂಕಾಂ ಅಥವಾ ಎಂಬಿಎ ಫೈನಾನ್ಸ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು ಮತ್ತು 35 ವರ್ಷ ವಯೋಮಿತಿ ಮೀರಿರಬಾರದು ಹಾಗೂ ಕನಿಷ್ಠ ಎರಡು ವರ್ಷಗಳ ಸಂಬಂಧಿತ ಅನುಭವ ಹೊಂದಿರಬೇಕು. ಅಕೌಂಟ್ಸ್ ಮ್ಯಾನೇಜರ್ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಯನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಧಾರವಾಡ ಜಿಲ್ಲಾ ಪಂಚಾಯತಿಯ ದೂರವಾಣಿ ಸಂಖ್ಯೆ : 0836-2443322 ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆ ಹೊರಡಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...