ಮರ್ಡರ್ ಮಿಸ್ಟ್ರಿಯಲ್ಲಿ ನವನಾಯಕನ ಲುಕ್ ಹೇಗಿದೆ ಗೊತ್ತಾ ?

Date:

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಮರ್ಡರ್ ಮಿಸ್ಟ್ರಿ ಆಧಾರಿತ ಸಿನಿಮಾಗಳು ತೆರೆ ಮೇಲೆ ಬರುತ್ತಿರುತ್ತೆ. ಇದೀಗ ಅದೇ ಸಾಲಗೆ ಮತ್ತೊಂದು ಸಿನಿಮಾ ಸೇರ್ಪಡೆಯಾಗಿದೆ. ಹೌದು, ಪರ್ಪಲ್ ಪ್ಯಾಚ್ ಪುಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಮರ್ಡರ್ ಮಿಸ್ಟ್ರಿ ಜೊತಡಗೆ ಇನ್ವೆಸ್ಟಿಗೇಷನ್ ಸ್ಟೋರಿ ಹೊಂದಿರುವ 4 ಇನ್ 6 ಸಿನಿಮಾ ಇದೀಗ ತೆರೆ ಮೇಲೆ ಬರಲು ಸಿದ್ಧವಾಗಿದೆ.

4 ಇನ್ 6 ಸಿನಿಮಾದಲ್ಲಿ ಲೀಡ್ ರೋಲ್‌ನಲದಲೊ ರಚನಾ ಇಂದರ್ ಹಾಗು ನವೀನ್ ಕುಮಾರ್ ಹಾಗು ಆದ್ಯಶೇಖರ್ ಕಾಣಿಸಿಕೊಂಡಿದ್ದಾರೆ. ಅಲ್ಲದೇ ಈ ಚಿತ್ರಕ್ಕೆ ದರ್ಶನ್ ಶ್ರೀನಿವಾಸ್ ಅವರು ಕಥೆ ಬರೆದಿದ್ದು, ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

ಇನ್ನೂ ಈ ಸಿನಿಮಾದಲ್ಲಿ ನಟಿ ರಚನಾ ಇಂದರ್, ವಿಭಿನ್ನ ರೂಪದಲ್ಲಿ ಕಾಣಿಸಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ರಚನಾ ಫಾರೆನ್ಸಿಕ್ ಡಿಟೆಕ್ಟಿವ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ದೇಶಕ ದರ್ಶನ್ ಶ್ರೀನಿವಾಸ, ಈ ಹಿಂದೆ 2 ಕಿರುಚಿತ್ರಗಳನ್ನು ನಿರ್ದೇಶಿಸಿದ್ದೆ. ನನ್ನ ಪ್ರಥಮ ನಿರ್ದೇಶನದ ಚಿತ್ರ ಇದಾಗಿದ್ದು ಕೊಲೆ ಪ್ರಕರಣ ಪತ್ತೆ ಹಚ್ಚುವಲ್ಲಿ ಫೋರೆನ್ಸಿಕ್ ರಿಪೋರ್ಟ್ ಇಂಪಾರ್ಟೆಂಟ್ ಆಗಿರುತ್ತದೆ. ೪ ಪ್ರಮುಖ ಪಾತ್ರಗಳ ಸುತ್ತ ಕಥೆ ನಡೆಯುತ್ತದೆ. ಕಥೆ ಮಾಡುವಾಗ ಫೋರೆನ್ಸಿಕ್ ತಜ್ಞರ ಸಲಹೆ ತೆಗೆದುಕೊಂಡೆ. ಚಿತ್ರಕ್ಕೆ ಬೆಂಗಳೂರು ಸುತ್ತಮುತ್ತ 30 ದಿನ ಚಿತ್ರೀಕರಿಸಲಾಗಿದೆ ಎಂದರು.

ನಿರ್ಮಾಪಕಿ ಸಾಯಿಪ್ರೀತಿ ಮಾತನಾಡಿ ತುಂಬಾ ಟ್ಯಾಲೆಂಟ್ ಇರೋ ತಂಡವಿದು. ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ. ಏಪ್ರಿಲ್ ಗೆ ರಿಲೀಸ್ ಮಾಡೋ ಪ್ಲಾನಿದೆ ಎಂದರು.

ನಾಯಕಿ ರಚನಾ ಇಂದರ್‌ ಮಾತನಾಡಿ ಮೊದಲಬಾರಿಗೆ ಇಂಥ ಪಾತ್ರ ಮಾಡಿದ್ದೇನೆ. ಚಿತ್ರದಲ್ಲಿ ನನ್ನ ಪಾತ್ರಕ್ಕೆ ಹೆಚ್ಚು ಮಾತಿಲ್ಲ. ಮುಖದಲ್ಲೇ ಎಕ್ಸ್ ಪ್ರೆಶನ್ಸ್‌ ತೋರಿಸಬೇಕಿತ್ತು ಎಂದರು.

ಇನ್ನು ಈ ಚಿತ್ರಕ್ಕೆ ನಿರ್ದೇಶಕರೇ ಎಡಿಟ‌ರ್ ಆಗಿದ್ದು ಮುತ್ತುರಾಜ್ ಸಾಥ್ ನೀಡಿದ್ದಾರೆ. ಚರಣ್‌ ತೇಜ್ ಅವರ ಛಾಯಾಗ್ರಹಣ, ಸತ್ಯಕಹಿ ಅವರ ಸಂಭಾಷಣೆ ಹಾಗೂ ಸಾಯಿ ಸೋಮೇಶ್ ಅವರ ಸಂಗೀತ ನಿರ್ದೇಶನವಿದೆ.

Share post:

Subscribe

spot_imgspot_img

Popular

More like this
Related

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಮತ್ತೊಮ್ಮೆ...

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ ಮಹಿಳೆಯರ...

ನನಗೆ ಈಗಲೇ ಅಧಿಕಾರ ಬೇಕು ಅಂತ ಇಲ್ಲ, ಪಕ್ಷಕ್ಕಾಗಿ ದುಡಿಯುತ್ತೇನೆ: ನಿಖಿಲ್ ಕುಮಾರಸ್ವಾಮಿ

ನನಗೆ ಈಗಲೇ ಅಧಿಕಾರ ಬೇಕು ಅಂತ ಇಲ್ಲ, ಪಕ್ಷಕ್ಕಾಗಿ ದುಡಿಯುತ್ತೇನೆ: ನಿಖಿಲ್...

ಹಿಟ್ಟಿನ ಹುಳಿ ರುಚಿಯನ್ನು ಕಡಿಮೆ ಮಾಡಲು ಕೆಲವು ಪರಿಣಾಮಕಾರಿ ವಿಧಾನ

ಇತ್ತೀಚಿನ ದಿನಗಳಲ್ಲಿ ಹವಾಮಾನ ಬದಲಾವಣೆ ಹಾಗೂ ಫ್ರಿಜ್ ತಾಪಮಾನ ಅಸ್ಥಿರತೆಯಿಂದಾಗಿ ಇಡ್ಲಿ–ದೋಸೆ...