No menu items!
17.7 C
Munich
Saturday, May 30, 2026

ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರ ಹತ್ಯೆ.! ಬೆಚ್ಚಿಬಿದ್ದ ಜನತೆ

Must read

ಗದಗ: ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರನ್ನು ಯಾರೋ ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ದಾಸರ ಓಣಿಯಲ್ಲಿ ನಡೆದಿದೆ. ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಆತನ ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಗೀಡಾದವರು. ಮೃತರೆಲ್ಲ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ.
ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಕ್ಕಳನ್ನು ಕೊಲೆ ಮಾಡಲಾಗಿದೆ. ಕೊಲೆ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮೃತರಲ್ಲಿ ಮೂವರು ಕೊಪ್ಪಳ ಮೂಲದವರಾಗಿದ್ದಾರೆ. ಸುದ್ದಿ ತಿಳಿದು ಶ್ವಾನದಳದೊಂದಿಗೆ ಘಟನಾ ಸ್ಥಳಕ್ಕೆ ಬಂದ ಸ್ಥಳೀಯ ಪೊಲೀಸರು ಇಂಚಿಂಚು ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ.

- Advertisement -spot_img

More articles

- Advertisement -spot_img

Latest article