ಮಲೆನಾಡಿನಲ್ಲಿ‌ ‘ಸಲಗ’ದ ಮಳೆ ಹಾಡಿನ ಚಿತ್ರೀಕರಣ..

Date:

‘ಜಾನಿ ಜಾನಿ ಎಸ್ ಪಪ್ಪಾ’ ಸಿನಿಮಾದ ಸಕ್ಸಸ್ ನ ನಂತರ ಸಲಗ ಸಿನಿಮಾದಲ್ಲಿ ಬ್ಯುಸಿಯಾಗಿರೋ ನಟ ದುನಿಯಾ ವಿಜಯ್ ನಟನೆಯ ಜೊತೆಗೆ ಈ ಬಾರಿ ನಿರ್ದೇಶನಕ್ಕೂ ಸಹ ಕಾಲಿಟ್ಟಿದ್ದಾರೆ. ಅಂದಹಾಗೆ ಕೊರೋನ ಹಾಗೂ ಮಹಾಮಳೆಯ ನಡುವೆಯೂ ಸಲಗ ಚಿತ್ರತಂಡ ಮಲೆನಾಡ ರಮಣೀಯ ತಾಣಗಳಲ್ಲಿ  ಸುಮಧುರ ಡ್ಯುಯೆಟ್ ಹಾಡನ್ನ ನಯನ ಮನೋಹರವಾಗಿ ಚಿತ್ರಿಸಿದೆ. ಈ ಮೂಲಕ ಸಲಗ ಮತ್ತೊಮ್ಮೆ ಚಂದನವನದಲ್ಲಿ ಜೋರಾಗಿ ಸುದ್ದಿ ಮಾಡುತ್ತಿದೆ.

ದುನಿಯಾ ವಿಜಯ್ ನಿರ್ದೇಶಿಸಿ ನಟಿಸ್ತಿರೋ ಈ ಚಿತ್ರದಲ್ಲಿ ಡಾಲಿ ಧನಂಜಯ್ ಪ್ರಮುಖ‌ ಪಾತ್ರದಲ್ಲಿ‌ ಕಾಣಿಸಿಕೊಂಡಿದ್ದು, ಸಂಜನಾ ಆನಂದ್ ನಾಯಕಿಯಾಗಿ‌ ತೆರೆ ಹಂಚಿಕೊಂಡಿದ್ದಾರೆ. ಟಗರು ಚಿತ್ರ ನಿರ್ಮಿಸಿದ್ದ ಕೆ.ಪಿ ಶ್ರೀಕಾಂತ್, ಸಲಗ ಸಿನಿಮಾಗೆ ನಿರ್ಮಾಣ ಮಾಡ್ತಿದ್ದಾರೆ. ಸಲಗ ಚಿತ್ರ ಈಗಾಗ್ಲೇ ಹತ್ತು ಹಲವು ವಿಶೇಷತೆಗಳಿಂದ ಗಾಂಧಿನಗರದಲ್ಲಿ ಅಭಿಮಾನಿಗಳಲ್ಲಿ ದೊಡ್ಡ ನಿರೀಕ್ಷೆ ಹುಟ್ಟಿಸಿದೆ. ಈ ನಡುವೆ ಕೋವಿಡ್ ಹಾವಳಿಯಿಂದ ಎಲ್ಲಾ ಲಾಕ್ ಆಗಿದ್ರೂ ಸಲಗ ಮಾತ್ರ ಮತ್ತೊಂದು ವಿಶೇಷ ವಿಚಾರದಿಂದ ಸಖತ್ತಾಗೇ ಘರ್ಜಿಸುತ್ತಿದೆ.

ಕೊರೊನಾ ಮಹಾಮಾರಿಯ ಸಂಕಷ್ಟದ ಸಂದರ್ಭದಲ್ಲೂ ಸಲಗ ಚಿತ್ರತಂಡ ಸರ್ಕಾರ ನೀಡಿರೋ ಎಲ್ಲಾ ಸೂಚನೆಗಳನ್ನು ಪಾಲಿಸಿ, ನಾಯಕ ನಾಯಕಿ ಸೇರಿ ಕೇವಲ 12 ಮಂದಿ ತಂತ್ರಜ್ಞರೊಂದಿಗೆ ಬ್ಯೂಟಿಫುಲ್ ಹಾಡನ್ನ ಚಿತ್ರಿಸಿರೋದು ವಿಶೇಷ. ಸಲಗ ಚಿತ್ರಕ್ಕೆ ಚರಣ್ ರಾಜ್ ಸಂಗೀತ ಸಂಯೋಜನೆಯನ್ನ ಮಾಡಿದ್ದು, ‘ಮಳೆಯೇ ಮಳೆಯೇ ಅಂಬೆಗಾಲಿಡುತ್ತಾ ಸುರಿಯೇ’ ಅನ್ನೋ ರೊಮ್ಯಾಂಟಿಕ್ ಸಾಂಗ್ ನ ಲೈನ್ ಗಳಿಗೆ ತಕ್ಕಂತೆ ಜಿಡಿ‌ಮಳೆಯಲ್ಲೇ ಸಲಗ ಸದ್ದಿಲ್ಲದೇ ಚಿತ್ರಿಸಿದೆ.

ದುನಿಯಾ ವಿಜಯ್ ಹಾಗೂ ಸಂಜನಾ ಆನಂದ್ ನಡುವಿನ ಈ ಪ್ರಣಯ ಗೀತೆಯನ್ನ ಮಳೆ, ಚಳಿ ನಡುವೆ ಯಾವುದನ್ನು ಲೆಕ್ಕಿಸದೆ ಚಿತ್ರೀಕರಿಸಲಾಗಿದೆ. ಅದ್ರಲ್ಲೂ ಛಾಯಾಗ್ರಹಕ ಶಿವಸೇನ ಕೆಲ‌ ಸೀಕ್ವೆನ್ಸ್ ಗಳನ್ನ ಒರಿಜಿನಲ್ ಮಳೆಯಲ್ಲೇ ಚಿತ್ರಿಸಿರೋದು ಮತ್ತೊಂದು ವಿಶೇಷ. ಇದೇ ಕಾರಣಕ್ಕೆ ಜಿಡಿ ಮಳೆಯ ಒಂದು ಶಾಟ್ ಗಾಗಿ ಚಿತ್ರತಂಡ ನಾಲ್ಕೈದು ಗಂಟೆ ಕಾದು 12 ಜನರೂ ಕೂಡಿ ಮಳೆ‌, ಕೆಸರಲ್ಲಿ ನಾಲ್ಕು ದಿನ ಎದ್ದು ಬಿದ್ದು ಅದ್ಭುತ ಹಾಡಿನ ಚಿತ್ರೀಕರಣ ಮಾಡಿ ಮುಗಿಸಿದೆ ಚಿತ್ರತಂಡ. ಇನ್ನು ಈ ಸಿನಿಮಾದಲ್ಲಿ ನಟಿಸಿದ ನಟಿ ಸಂಜನಾ ಆನಂದ್ ಈ ಮೊದ್ಲು ಕೆಮಿಸ್ಟ್ರಿ ಆಫ್ ಕರಿಯಪ್ಪ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶ ಮಾಡಿದ್ದರು. 

ಅಂದಹಾಗೆ ಈ ಅದ್ಭುತ ಹಾಡನ್ನ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ, ಹಾಸನದ ಸಕಲೇಶಪುರ ಸೇರಿ ಪಶ್ಚಿಮ ಘಟ್ಟಗಳ ಸುತ್ತಮುತ್ತಲಿನ ಸುಂದರ ತಾಣಗಳಲ್ಲಿ ಶೂಟಿಂಗ್ ಮಾಡಲಾಗಿದೆ. ಸಲಗ ಚಿತ್ರದಲ್ಲಿ ಈ ಹಾಡು ಮತ್ತೊಂದು ಸ್ಪೆಷಲ್ ಮತ್ತು‌ ಹೈಲೈಟ್ ಗಳಲ್ಲೊಂದಾಗಲಿದೆಯಂತೆ. ಈಗಾಗಲೇ ಶೂರಿಯಣ್ಣ ಹಾಡು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಆ್ಯಂಟನಿ ದಾಸ್ ಹಾಡಿರೋ ಸೂರಿಯಣ್ಣ ಅತ್ಯದ್ಭುತವಾಗಿದೆ. ಇನ್ನೇನು ಬಾಕಿ ಇರೋ ಚಿತ್ರೀಕರಣವನ್ನ ಮುಗಿಸಿಕೊಂಡು ಪೋಸ್ಟ್ ಪ್ರೊಡಕ್ಷನ್ ವರ್ಕ್ ಕಂಪ್ಲೀಟ್ ಮಾಡಿ ಥಿಯೇಟರ್ ಗೆ ಲಗ್ಗೆ ಇಡಲಿದೆ ಸಲಗ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ!

ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ! ಬೆಂಗಳೂರು: ಬಾಗಲಗುಂಟೆ...

Bangalore: ಬಾರ್‌ʼನಲ್ಲಿ ಕುಡಿಯಲು ಹೋದ ವ್ಯಕ್ತಿ ನಿಗೂಢ ಸಾವು!

Bangalore: ಬಾರ್‌ʼನಲ್ಲಿ ಕುಡಿಯಲು ಹೋದ ವ್ಯಕ್ತಿ ನಿಗೂಢ ಸಾವು! ಬೆಂಗಳೂರು: ಬಾರ್‌ಗೆ ಕುಡಿಯಲು...

ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಹವಾಮಾನ ಇಲಾಖೆ 

ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಹವಾಮಾನ ಇಲಾಖೆ  ಬೆಂಗಳೂರು: ರಾಜ್ಯದ...

ಹೃದಯ ಸಮಸ್ಯೆ ಇದ್ದವರಿಗೆ ದಾಳಿಂಬೆ ಬೆಸ್ಟ್ ಅಂತೆ; ನೀವು ಕೂಡ ತಪ್ಪದೇ ಸೇವಿಸಿ

ಹೃದಯ ಸಮಸ್ಯೆ ಇದ್ದವರಿಗೆ ದಾಳಿಂಬೆ ಬೆಸ್ಟ್ ಅಂತೆ; ನೀವು ಕೂಡ ತಪ್ಪದೇ...