No menu items!
7.5 C
Munich
Tuesday, April 14, 2026

ಮಳೆ ಹಾನಿ ಸಂತ್ರಸ್ತರಿಗೆ ಕೂಡಲೇ ಪರಿಹಾರ ಕೊಡಿ… ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ..

Must read

ರಾಜ್ಯದಲ್ಲಿ  ಧಾರಕಾರವಾಗಿ ಸುರಿಯುತ್ತಿರುವ ಮಳೆ ಅವಾಂತರ ಸೃಷ್ಟಿಸಿದೆ. ಮಲೆನಾಡು, ಕರಾವಳಿ, ಉತ್ತರ ಕರ್ನಾಟಕ ಭಾಗಗಳಲ್ಲಿಳೆ ಮಳೆಯಿಂದಾಗಿ ಭಾರೀ ಹಾನಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತರಾದ ಕುಟುಂಬದವರಿಗೆ ತಕ್ಷಣವೇ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಸಿಎಂ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಹಿಂದಿನ ರೀತಿಯಲ್ಲೇ ಪರಿಹಾರ ವಿತರಿಸಲು ಬಿಎಸ್ ವೈ ತಿಳಿಸಿದ್ದು ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣ ಪರಿಹಾರವಾಗಿ 10,000 ರೂ., ಪೂರ್ಣ ಮನೆ ಹಾನಿಯಾಗಿದ್ದರೆ 5 ಲಕ್ಷ ರೂ. ಮತ್ತು ಭಾಗಶಃ ಹಾನಿಯಾಗಿದ್ದಲ್ಲಿ ಪರಿಶೀಲನೆ ನಡೆಸಿ ಹಾನಿಗೆ ತಕ್ಕಂತೆ ಪರಿಹಾರ ವಿತರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಅವಶ್ಯವಿದ್ದರೆ, ಹಳ್ಳಿಗಳಲ್ಲಿನ ಶಾಲಾ-ಕಾಲೇಜುಗಳನ್ನು ನಿರಾಶ್ರಿತರ ಕೇಂದ್ರಗಳಾಗಿ ಮಾರ್ಪಡಿಸಿ ಅಗತ್ಯ ಸೌಲಭ್ಯ ಕಲ್ಪಿಸುವಂತೆ ನಿರ್ದೇಶಿಸಿದ್ದಾರೆ. ರಾಜ್ಯದಲ್ಲಿ ಹಲವು ಭಾಗಗಳಲ್ಲಿ ಮಳೆಯಾಗುತ್ತಿದ್ದು, ಜನಜೀಬನ ಅಸ್ತವ್ಯಸ್ತಗೊಂಡಿದೆ. ‌ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ. ಮಳೆ ಪರಿಸ್ಥಿತಿ ಎದುರಿಸಲು ಸರ್ಕಾರ ಸಜ್ಜಾಗಿದೆ. 

 

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article