ಮಹಾಕುಂಭದಲ್ಲಿ ಕಾಲ್ತುಳಿತ: ಹಲವರಿಗೆ ಗಾಯ – ಆಸ್ಪತ್ರೆಗೆ ದಾಖಲು!
ಇತ್ತಿಚಿಗೆ ತಿರುಪತಿಯಲ್ಲಿ ವೈಕುಂಠ ದ್ವಾರ ದರ್ಶನದ ಟಿಕೆಟ್ ಪಡೆಯುವ ವೇಳೆ ಹೆಚ್ಚಾದ ಭಕ್ತಸಾಗರದಿಂದ ಕಾಲ್ತುಳಿತ ಉಂಟಾಗಿತ್ತು. ಭಾರೀ ಪ್ರಮಾಣದ ಕಾಲ್ತುಳಿತ ಸಂಭವಿಸಿದ್ದು, ಸುಮಾರು ಹಲವು ಮಂದಿ ಸಾವನ್ನಪ್ಪಿದ್ದರು . ಇದೀಗ ಮಹಾ ಕುಂಭಮೇಳದ ಸಂಗಮ್ ಪ್ರದೇಶದಲ್ಲಿ ಕಾಲ್ತುಳಿತ ಸಂಭವಿಸಿ ಪ್ರಾಣಹಾನಿ ಸಂಭವಿಸಿವೆ.
ಹೌದು ಬುಧವಾರ ಮುಂಜಾನೆ ಮೌನಿ ಅಮಾವಾಸ್ಯೆಯ ಸಂದರ್ಭದಲ್ಲಿ ಗಂಗಾನದಿಯಲ್ಲಿ ಪವಿತ್ರ ಸ್ನಾನ ಮಾಡಲು ಹಲವಾರು ಜನರು ಆಗಮಿಸಿದ್ದರಿಂದ ಕಾಲ್ತುಳಿತ ಸಂಭವಿಸಿದೆ. ಇದರಿಂದಾಗಿ ಹಲವಾರು ಮಂದಿ ಗಾಯಗೊಂಡಿದ್ದಾರೆ. ಈ ಕಾಲ್ತುಳಿತದಲ್ಲಿ 20 ರಿಂದ 25 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಕೂಡಲೆ ಸ್ಥಳಕ್ಕೆ ಆಗಮಿಸಿದ ಆಂಬುಲೆನ್ಸ್‌ಗಳಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಮೇಳದ ಮೈದಾನದೊಳಗಿನ ಕೇಂದ್ರ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಹಲವಾರು ಜನರನ್ನು ಆಸ್ಪತ್ರೆಗೆ ಕರೆತರಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.