ಮಹಾಕುಂಭ ಮುಗಿಸಿ ಕಾಶಿಗೆ ತೆರಳುವಾಗ ಭೀಕರ ಅಪಘಾತ: ಬೀದರ್ ಮೂಲದ 5 ಮಂದಿ ಸಾವು
ಬೀದರ್: ಮಹಾಕುಂಭ ಮುಗಿಸಿ ಕಾಶಿಗೆ ತೆರಳುವಾಗ ಭೀಕರ ಅಪಘಾತ ಸಂಭವಿಸಿ ಬೀದರ್ ಮೂಲದ 5 ಮಂದಿ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಮಿರಾಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಆರು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳು ಎಂದು ತಿಳಿದುಬಂದಿದೆ.
ಒಂದೇ ಕುಟುಂಭದ 12 ಜನರು ಎರಡು ದಿನಗಳ ಹಿಂದೆ ಕ್ರೂಸರ್ ವಾಹನದಲ್ಲಿ ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳಿದ್ದರು. ಉತ್ತರಪ್ರದೇಶದ ಮಿರಾಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಶುಕ್ರವಾರ (ಫೆ.21) ಬೆಳಗಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಡಿಕ್ಕಿಯಾಗಿದೆ. ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.