ಕೆ.ಗೋಪಾಲಯ್ಯ ಅವರಿಂದಲೇ ಮಹಾಲಕ್ಷ್ಮಿ ಲೇಔಟ್ ಜೆಡಿಎಸ್‍ನ ಭದ್ರ ಕೋಟೆಯಾಗಿತ್ತು. ಸಮ್ಮಿಶ್ರ ಸರ್ಕಾರದಲ್ಲಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರೆ ಇಂದು ಚುನಾವಣೆಯೇ ನಡೆಯುತ್ತಿರಲಿಲ್ಲ.ಏನೇ ಆದರೂ ನಾವು ಅವರಿಗೆ ಬೆಂಬಲ ನೀಡಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿಕೊಳ್ಳುತ್ತೇವೆ ಎಂದು ಹೇಳಿದರು.
ಜೆಡಿಎಸ್ ಅಭ್ಯರ್ಥಿಯನ್ನು ಆಯ್ಕೆ ಮಾಡುವಾಗ ಜೆಡಿಎಸ್ ನ ಹಿರಿಯ ಮುಖಂಡರು ದೇವೇಗೌಡ ಅವರು ಕುಮಾರಸ್ವಾಮಿ ಅವರು ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ. ಇನ್ನು ನಮಗೆ ಜೆಡಿಎಸ್ ಅಭ್ಯರ್ಥಿಯ ಪರಿಚಯವೂ ಇಲ್ಲ. ಉಪಚುನಾವಣೆಯಲ್ಲಿ ನಾವು ಅವರನ್ನು ಬೆಂಬಲಿಸುವುದಾದರೂ ಹೇಗೆ ಎಂದು ಪ್ರಶ್ನಿಸಿದರು. ಗೋಪಾಲಯ್ಯ ಅವರಿಗೆ ಮಹದೇವು ಬೆಂಬಲ ಸೂಚಿಸಿರುವುದರಿಂದ ಬಿಜೆಪಿಗೆ ಕ್ಷೇತ್ರ ದಲ್ಲಿ ಇನ್ನಷ್ಟು ಶಕ್ತಿ ಬಂದಂತಾಗಿದೆ. ಈಗಾಗಲೇ ಕಾಂಗ್ರೆಸ್-ಜೆಡಿಎಸ್ ಸೇರಿದಂತೆ ಅನ್ಯ ಪಕ್ಷಗಳ ಮುಖಂಡರು ಬೆಂಬಲ ಸೂಚಿಸಿದ್ದಾರೆ.