ಮಹಾಲಕ್ಷ್ಮಿ ಲೇಔಟ್ನಲ್ಲಿ ಪ್ರಚಾರಕ್ಕೆಂದು ಬಂದಿದ್ದ ದೇವೇಗೌಡ ಅವರು ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ಮಾಡುವಾಗ ಉಪ ಚುನಾವಣೆಯಲ್ಲಿ ನಾನೇ ಅಭ್ಯರ್ಥಿ ಎಂದು ತಿಳಿದುಕೊಳ್ಳಿ. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಈ ಕ್ಷೇತ್ರದ ಅಭಿವೃದ್ಧಿಗೆ ಎಷ್ಟು ಹಣ ಕೊಟ್ಟಿದ್ದಾರೆ ಎಂಬುದರ ಬಗ್ಗೆ ಗೋಪಾಲಯ್ಯ ಬಹಿರಂಗ ಚರ್ಚೆಗೆ ಬರಲಿ ಎಂದು ಆಹ್ವಾನಿಸಿ ಅವರ ವಿರುದ್ಧ ಕಿಡಿಕಾರಿದ್ದಾರೆ .
ಅಭಿವೃದ್ಧಿಗೆ ಅನುದಾನ ಕೊಟ್ಟಿಲ್ಲ ಎಂದು ಆರೋಪ ಮಾಡುತ್ತಿರುವವರು ಆತ್ಮಾವಲೋಕನ ಮಾಡಿಕೊಳ್ಳಬೇಕು. ದೇವಸ್ಥಾನಕ್ಕೆ ಬಂದು ಚರ್ಚೆ ಮಾಡಲಿ. ಎಷ್ಟು ಹಣ ಬಂತು, ಎಲ್ಲಿ ಹೋಯಿತು ಎಂಬುದು ಹೇಳಲಿ ಎಂದು ಗೊಪಾಲಯ್ಯ ಅವರಿಗೆ ಸವಾಲು ಹಾಕಿದರು.