No menu items!
10.2 C
Munich
Thursday, April 16, 2026

ಮಹಿಳಾ ನೌಕರರಿಗೆ ಮಾಸಿಕ ರಜೆ ಕಡ್ಡಾಯ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

Must read

ಮಹಿಳಾ ನೌಕರರಿಗೆ ಮಾಸಿಕ ರಜೆ ಕಡ್ಡಾಯ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ ನೀಡುವ ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿದೆ.
ಈ ಕುರಿತಾಗಿ ಬೆಳಗಾವಿ ಜಿಲ್ಲೆಯ ಹೋಟೆಲ್ ಉದ್ಯೋಗಿ ಚಂದ್ರವ್ವ ಹಣಮಂತ ಗೋಕಾವಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಧಾರವಾಡ ಪೀಠ ಈ ಆದೇಶ ನೀಡಿದ್ದು, ಅರ್ಜಿಯನ್ನು ಇತ್ಯರ್ಥಪಡಿಸಿದೆ.
ಕರ್ನಾಟಕ ಗೆಜೆಟ್ನಲ್ಲಿ ಪ್ರಕಟಗೊಂಡಿದ್ದರೂ, ಋತುಚಕ್ರ ರಜೆ ನೀತಿ ಹೋಟೆಲ್ಗಳು ಸೇರಿದಂತೆ ಅನೇಕ ಸಂಸ್ಥೆಗಳಲ್ಲಿ ಸಮರ್ಪಕವಾಗಿ ಜಾರಿಗೆ ಬಂದಿಲ್ಲ ಎಂಬ ಆಕ್ಷೇಪಣೆ ಅರ್ಜಿಯಲ್ಲಿ ವ್ಯಕ್ತವಾಗಿತ್ತು.
ಪೀಠ ತನ್ನ ಆದೇಶದಲ್ಲಿ, ಸಂವಿಧಾನದ ಜೀವಿಸುವ ಹಕ್ಕು ಮತ್ತು ಸಮಾನತೆಯ ಹಕ್ಕಿನ ವ್ಯಾಪ್ತಿಯಲ್ಲಿ ಈ ರಜೆ ನೀತಿ ಬರುತ್ತದೆ ಎಂದು ಸ್ಪಷ್ಟಪಡಿಸಿದೆ. ಮಹಿಳೆಯರ ಜೈವಿಕ ವೈಶಿಷ್ಟ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಈ ರೀತಿಯ ಸೌಲಭ್ಯಗಳನ್ನು ಒದಗಿಸುವುದು ಸಮಾನತೆಯ ಹಕ್ಕಿಗೆ ವಿರುದ್ಧವಲ್ಲ, ಬದಲಾಗಿ ಅದನ್ನು ಬಲಪಡಿಸುವುದಾಗಿದೆ ಎಂದು ಹೇಳಿದೆ.
ಹೀಗಾಗಿ ಸಂಘಟಿತ ಹಾಗೂ ಅಸಂಘಟಿತ ವಲಯಗಳನ್ನೂ ಒಳಗೊಂಡಂತೆ ಎಲ್ಲಾ ಕ್ಷೇತ್ರಗಳಲ್ಲಿ ಸರ್ಕಾರ ತನ್ನ ನೀತಿ ಜಾರಿಯಾಗುವಂತೆ ಖಚಿತಪಡಿಸಿಕೊಳ್ಳಬೇಕು ಎಂದು ಕೋರ್ಟ್ ಸೂಚಿಸಿದೆ.
ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಕೀಲರು, ಈ ನೀತಿ ಪ್ರಗತಿಪರ ಹೆಜ್ಜೆಯಾಗಿದ್ದು, ಅಸಂಘಟಿತ ವಲಯದಲ್ಲಿ ಜಾರಿಗೆ ಕೆಲವು ಪ್ರಾಯೋಗಿಕ ಅಡಚಣೆಗಳಿವೆ. ಜೊತೆಗೆ ಈ ಸಂಬಂಧ ಮಸೂದೆ ವಿಧಾನಸಭೆಯಲ್ಲಿ ಪರಿಶೀಲನೆಯಲ್ಲಿದೆ ಎಂದು ಪೀಠಕ್ಕೆ ಮಾಹಿತಿ ನೀಡಿದ್ದಾರೆ.

- Advertisement -spot_img

More articles

- Advertisement -spot_img

Latest article