ಮಹಿಳಾ ಮೀಸಲಾತಿ ಕೊಡಬೇಕು ಎಂದು ಒತ್ತಾಯಿಸಿಸುವವರಲ್ಲಿ ನಾವು ಮುಂಚೂಣಿಯಲಿದ್ದೇವೆ: ಸಿದ್ದರಾಮಯ್ಯ
ಹಾಸನ: ಮಹಿಳಾ ಮೀಸಲಾತಿ ಕೊಡಬೇಕು ಎಂದು ಒತ್ತಾಯಿಸಿಸುವವರಲ್ಲಿ ನಾವು ಮುಂಚೂಣಿಯಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಹಿಳಾ ಮೀಸಲಾತಿ ಜಾರಿಯಾಗಿಲ್ಲದಿರುವ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿ ನಮ್ಮ ಸರ್ಕಾರ ಮೊದಲಿನಿಂದಲೂ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಮಹಿಳಾ ಮೀಸಲಾತಿ ಕೊಡಬೇಕು ಎಂದು ಒತ್ತಾಯಿಸಿಸುವವರಲ್ಲಿ ನಾವು ಮುಂಚೂಣಿಯಲಿದ್ದೇವೆ. ಮೀಸಲಾತಿ ಕೊಡಬೇಕು ಎಂದರೆ ತಕ್ಷಣ ಕೊಡಬೇಕು. ಕೇಂದ್ರ ಸರ್ಕಾರ ಇದನ್ನು ಏಕೆ ಮುಂದೂಡಬೇಕು ಎಂದು ಪ್ರಶ್ನಿಸಿದರು. ವಿರೋಧ ಪಕ್ಷಗಳನ್ನು ಅವಿಶ್ವಾಸ ನಿರ್ಣಯ ತರಲಿ, ನಾವು ಎದುರಿಸಲು ತಯಾರಿದ್ದೇವೆ. ನಾವು ತೆರೆದ ಪುಸ್ತಕ ಇದ್ದಂತೆ. ನಮ್ಮದು ಪಾರದರ್ಶಕ ಸರ್ಕಾರ. ಎಲ್ಲವನ್ನು ಎದುರಿಸಲು ತಯಾರಿದ್ದೇವೆ ಎಂದರು. ಮಾನವ – ವನ್ಯಜೀವಿ ಸಂಘರ್ಷ ವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇದನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು. ಸಿದ್ದರಾಮಯ್ಯ ಇಲ್ಲದೇ ಕಾಂಗ್ರೆಸ್ ಇಲ್ಲ ಎಂದು ಮಾಜಿ ಸಚಿವ ಕೆ. ಎನ್.ರಾಜಣ್ಣ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಅವರು ಹೇಳಿಕಿದ್ದಕ್ಕೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.






