ಮಹಿಳಾ ಸಹೋದ್ಯೋಗಿಗೆ ಕಿರುಕುಳ ಆರೋಪ: ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್ ಬಂಧನ
ಬೆಂಗಳೂರು: ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಕಚೇರಿಯ ರಿಜಿಸ್ಟ್ರಾರ್ ಡಾ. ಮಲ್ಲು ಅವರನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಗಾಂಧಿನಗರದಲ್ಲಿರುವ ಕರ್ನಾಟಕ ನರ್ಸಿಂಗ್ ಕೌನ್ಸಿಲ್ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರು, ಡಾ. ಮಲ್ಲು ಅವರು ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಾರ್ಚ್ 26ರಂದು ಉಪ್ಪಾರಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಆರೋಪಿಗೆ ನೋಟಿಸ್ ನೀಡಲಾಗಿತ್ತು. ಆದರೆ ಅವರು ಪ್ರತಿಕ್ರಿಯೆ ನೀಡದ ಹಿನ್ನೆಲೆಯಲ್ಲಿ ಮಂಗಳವಾರ ಅವರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಯತೀಶ್ ಎನ್. ಮಾಹಿತಿ ನೀಡುವಂತೆ, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.






