ಮಹಿಳಾ ಸಿಬ್ಬಂದಿ ಬಟ್ಟೆ ಬದಲಿಸುವ ವಿಡಿಯೋ ಸೆರೆ ಹಿಡಿಯುತ್ತಿದ್ದ ಕಾಮುಕ!

Date:

ಬೆಂಗಳೂರು: ಆಸ್ಪತ್ರೆಯಲ್ಲಿ ಮಹಿಳೆಯರು ಬಟ್ಟೆ ಬದಲಾಯಿಸುವುದನ್ನು ಮೊಬೈಲ್​ನಲ್ಲಿ ಸೆರೆ ಹಿಡಿದು ವಿಕೃತ ಆನಂದ ಅನುಭವಿಸುತ್ತಿದ್ದ ಕಾಮುಕನನ್ನು ತಿಲಕ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಸರ್ಕಾರಿ ಅಸ್ಪತ್ರೆಯೊಂದರ ವೈದ್ಯೆ ನೀಡಿದ ದೂರಿನ ಮೇರೆಗೆ ಲ್ಯಾಬ್ ಟೆಕ್ನಿಷಿಯನ್ ಮಾಲತೇಶ್​ನನ್ನು ಬಂಧಿಸಲಾಗಿದೆ. ಆಸ್ಪತ್ರೆಯೊಂದರಲ್ಲಿ ಲ್ಯಾಬ್ ಟೆಕ್ನಿಶಿಯನ್​ ಆಗಿ ಮಾಡುತ್ತಿದ್ದ ಮನೋಜ್ ಹೆಚ್ಚಾಗಿ ಆಪರೇಷನ್ ಥಿಯೇಟರ್​ನಲ್ಲಿ ಇರುತ್ತಿದ್ದ. ಆಪರೇಷನ್ ಮಾಡುವ ಮುನ್ನ ಮಹಿಳಾ ಸಿಬ್ಬಂದಿ ಬಟ್ಟೆ ಬದಲಾಯಿಸುವುದನ್ನೇ ಕಾಯುತ್ತಿದ್ದ. ಬಟ್ಟೆ ಚೇಂಜ್ ಮಾಡಲು ಆಗಮಿಸುತ್ತಿದ್ದ ಆರೋಪಿ ಚಾರ್ಜಿಂಗ್ ನೆಪದಲ್ಲಿ‌ ಮೊಬೈಲ್ ಅಲ್ಲೇ ಇಡುತ್ತಿದ್ದ. ಬಳಿಕ ಮಹಿಳೆಯರು ಬಟ್ಟೆ ಬದಲಾಯಿಸುವುದನ್ನು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ. ಬಳಿಕ ಮನೆಗೆ ಹೋಗಿ ಒಬ್ಬಂಟಿಯಾಗಿ ನೋಡಿ ವಿಕೃತ ಆನಂದ ಪಡುತ್ತಿದ್ದ ಎನ್ನಲಾಗ್ತಿದೆ.

ಇತ್ತೀಚೆಗೆ ಮಹಿಳಾ ಸಿಬ್ಬಂದಿ ಬಟ್ಟೆ ಬದಲಾಯಿಸುವಾಗ ಚಾರ್ಜಿಂಗ್ ಹಾಕಿದ್ದ ಮೊಬೈಲ್​ ಅನ್ನು ಗಮನಿಸಿದ್ದಾರೆ. ಅನುಮಾನಗೊಂಡು ಪರಿಶೀಲಿಸಿದಾಗ ರೆರ್ಕಾಡಿಂಗ್ ಮೋಡ್​ನಲ್ಲಿ ಇರುವುದು ಗೊತ್ತಾಗಿದೆ‌. ಮೊಬೈಲ್ ಗ್ಯಾಲರಿ ನೋಡಿದಾಗ ಅಸಲಿ ವಿಚಾರ ಗೊತ್ತಾಗಿದೆ. ಈ ಸಂಬಂಧ ತಿಲಕ್ ನಗರ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

 

Share post:

Subscribe

spot_imgspot_img

Popular

More like this
Related

ನಾವು ಕೃಷ್ಣಾ, ಮಹದಾಯಿ ಯೋಜನೆಗಳ ಪರವಾಗಿ ಕೆಲಸ ಮಾಡುತ್ತಿದ್ದೇವೆ: ಡಿ.ಕೆ.ಶಿವಕುಮಾರ್‌

ನಾವು ಕೃಷ್ಣಾ, ಮಹದಾಯಿ ಯೋಜನೆಗಳ ಪರವಾಗಿ ಕೆಲಸ ಮಾಡುತ್ತಿದ್ದೇವೆ: ಡಿ.ಕೆ.ಶಿವಕುಮಾರ್‌ ಬೆಳಗಾವಿ:“ನಾನು ನೀರಾವರಿ...

ಇ-ಖಾತಾ ಮಾಡಿಕೊಡುವಲ್ಲಿ ಗೃಹ ಮಂಡಳಿ ಯಿಂದ ನಿರ್ಲಕ್ಷ ವಾಗಿಲ್ಲ: ಸಚಿವ ಜಮೀರ್

ಇ-ಖಾತಾ ಮಾಡಿಕೊಡುವಲ್ಲಿ ಗೃಹ ಮಂಡಳಿ ಯಿಂದ ನಿರ್ಲಕ್ಷ ವಾಗಿಲ್ಲ: ಸಚಿವ ಜಮೀರ್ ಬೆಳಗಾವಿ:...

ಭೂ ಪರಿವರ್ತನೆ ನಿಯಮಗಳ ಸರಳೀಕರಣ: ಸಚಿವ ಕೃಷ್ಣ ಬೈರೇಗೌಡ

ಭೂ ಪರಿವರ್ತನೆ ನಿಯಮಗಳ ಸರಳೀಕರಣ: ಸಚಿವ ಕೃಷ್ಣ ಬೈರೇಗೌಡ ಬೆಳಗಾವಿ: ರಾಜ್ಯದಲ್ಲಿ ಕೃಷಿ...

ಚಿನ್ನದ ಬೆಲೆ ಏರಿಕೆ! ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಇಂದಿನ ರೇಟ್ ಹೀಗಿದೆ

ಚಿನ್ನದ ಬೆಲೆ ಏರಿಕೆ! ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಇಂದಿನ ರೇಟ್...