No menu items!
8.6 C
Munich
Wednesday, April 15, 2026

ಮಹಿಳೆಗೆ ಖಾಸಗಿ ಅಂಗ ತೋರಿಸಿ ವಿಕೃತವಾಗಿ ವರ್ತಿಸಿದ್ದ ಯುವಕ ಅರೆಸ್ಟ್.!‌

Must read

ಮಹಿಳೆಗೆ ಖಾಸಗಿ ಅಂಗ ತೋರಿಸಿ ವಿಕೃತವಾಗಿ ವರ್ತಿಸಿದ್ದ ಯುವಕ ಅರೆಸ್ಟ್.!‌

ಬೆಂಗಳೂರು: ಕಾಮುಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಹೌದು ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮಹಿಳೆಯರಿಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆಯುತ್ತಿದ್ದ ಯುವಕನನ್ನ ಶಿವಾಜಿನಗರ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಕಾರ್ತಿಕ್ ಎಂದು ಗುರುತಿಸಲಾಗಿದೆ. ಏ.13 ರಂದು ಕ್ವೀನ್ಸ್ ರಸ್ತೆಯ ರಾಜೀವ್ ಗಾಂಧಿ ಕಾಲೋನಿಯಲ್ಲಿ ಘಟನೆ ನಡೆದಿತ್ತು.
ಊಟ ಮುಗಿಸಿ ಎರಡನೇ ಮಹಡಿಗೆ ಮಲಗಲು ಮಹಿಳೆ ತೆರಳುತ್ತಿದ್ದರು. ಈ ವೇಳೆ ಎದುರು ಮನೆಯಲ್ಲಿರುವ ಆರೋಪಿ, ಪ್ಯಾಂಟ್ ಬಿಚ್ಚಿ ಖಾಸಗಿ ಅಂಗ ತೋರಿಸಿ ವಿಕೃತಿ ಮೆರೆದಿದ್ದ. ಇದನ್ನು ಪ್ರಶ್ನೆ ಮಾಡಿದ ಮಹಿಳೆಯ ಪತಿ ಮೇಲೆ ಹಲ್ಲೆ ಕೂಡ ಮಾಡಿದ್ದ. ಅಲ್ಲದೇ ಜಗಳ ಬಿಡಿಸಲು ಬಂದವರ ಮೇಲೆಯೂ ಅಟ್ಯಾಕ್ ಮಾಡಿದ್ದ.
ಎರಡನೇ ಮಹಡಿಯಿಂದ ಹಾಲೋಬ್ಲಾಕ್, ಹೂವಿನ ಪಾಟ್ ಅನ್ನು ಕೆಳಮಹಡಿಯಲ್ಲಿದ್ದವರ ಮೇಲೆ ಎಸೆದಿದ್ದ. ಬುದ್ಧಿ ಹೇಳಲು ಹೋಗಿದ್ದವರ ಮೇಲೆಯೂ ಹಲ್ಲೆ ಮಾಡಿದ್ದ. ಘಟನೆಯಲ್ಲಿ ಏಳು ಜನರ ಮೇಲೆ ಹಲ್ಲೆ ನಡೆಸಿದ್ದ ಬಗ್ಗೆ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಕರಣ ದಾಖಲಿಸಿಕೊಂಡ ಶಿವಾಜಿ ನಗರ ಪೊಲೀಸರು ಆರೋಪಿ ಕಾರ್ತಿಕ್‌ನನ್ನು ಬಂಧಿಸಿ, ಜೈಲಿಗಟ್ಟಿದ್ದಾರೆ.

- Advertisement -spot_img

More articles

- Advertisement -spot_img

Latest article