ಸ್ಯಾಂಡಲ್ವುಡ್ ನಟ ದರ್ಶನ್ ಅವರ ಬೆಂಗಳೂರಿನ ರಾಜರಾಜೇಶ್ವರಿ ನಗರದ ಮನೆಯಲ್ಲಿ ಸಾಕಿದ್ದ ನಾಯಿ, ಮಹಿಳೆಯೊಬ್ಬರಿಗೆ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿಂತೆ ಆರ್.ಆರ್.ನಗರ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 150ಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್ ಅನ್ನು ಆರ್.ಆರ್.ನಗರ ಪೊಲೀಸರು ಸಿಟಿ ಸಿವಿಲ್ ಕೋರ್ಟ್ ಗೆ ಸಲ್ಲಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐದಕ್ಕೂ ಹೆಚ್ಚು ಮಂದಿಯನ್ನ ಸಾಕ್ಷಿಗಳಾಗಿ ಪೊಲೀಸರು ಪರಿಗಣಿಸಿದ್ದರು. ನಟ ದರ್ಶನ್ ಅವರನ್ನೂ ಸಾಕ್ಷಿಯಾಗಿ ಹೇಳಿಕೆ ದಾಖಲಿಸಿದ್ದರು. ಇದೀಗ ಚಾರ್ಜ್ ಶೀಟ್ ನಲ್ಲಿ ನಟ ದರ್ಶನ್ ಹೆಸರು ಕೈಬಿಟ್ಟಿದ್ದಾರೆ. ಘಟನೆಗೂ ದರ್ಶನ್ ಗೂ ಯಾವುದೇ ಸಂಬಂಧ ಇಲ್ಲವೆಂದು ಉಲ್ಲೇಖ ಮಾಡಿದ್ದಾರೆ.
ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ: ನಟ ದರ್ಶನ್ಗೆ ಬಿಗ್ ರಿಲೀಫ್
Date: