ಕೂಲಿ ಕಾರ್ಮಿಕರು ಹಾಗೂ ಬಡ ಹೆಣ್ಣು ಮಕ್ಕಳಿಗೆ ಬಡವರ ಬಂಧು ಯೋಜನೆ ರೀತಿಯಲ್ಲೇ ಮಹಿಳೆಯರಿಗೆ 10,000 ರೂ. ಸಹಾಯಧನ ನೀಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕ್ರೈಸ್ತ ವಸತಿ ಶಾಲೆಗಳ ಮಕ್ಕಳಿಗೂ ಕ್ಷೀರಭಾಗ್ಯ ಯೋಜನೆ ವಿಸ್ತರಿಸಲಾಗುವುದು. ಇನ್ನು ರೈತರಿಗೆ ಟ್ರ್ಯಾಕ್ಟರ್ ಖರೀದಿಸಲು 3 ಲಕ್ಷ ರೂ. ವರೆಗೆ ಸಹಾಯಧನ ನೀಡಲಿದ್ದು, ಮೀನು ಮಳಿಗೆ ಸ್ಥಾಪಿಸಲು 7 ಲಕ್ಷ ರೂ.ವರೆಗೆ ಸಹಾಯಧನ ನೀಡಲಾಗುವುದು ಎಂದು ಹೇಳಿದ್ದಾರೆ.