ಮಹಿಳೆಯರ ಸುರಕ್ಷತೆಗೆ ಬರ್ತಾರೆ ಅಕ್ಕಪಡೆ: ಶೀಘ್ರವೇ ಜಾರಿ ಎಂದ ಹೆಬ್ಬಾಳ್ಕರ್!

Date:

ಮಹಿಳೆಯರ ಸುರಕ್ಷತೆಗೆ ಬರ್ತಾರೆ ಅಕ್ಕಪಡೆ: ಶೀಘ್ರವೇ ಜಾರಿ ಎಂದ ಹೆಬ್ಬಾಳ್ಕರ್!

ಬೆಂಗಳೂರು:- ರಾಜ್ಯದ ಮಹಿಳೆಯರ ರಕ್ಷಣೆಗೆ ಮಹಿಳಾ ಪೊಲೀಸ್ ಒಳಗೊಂಡ ಅಕ್ಕಾ ಪಡೆ ಶೀಘ್ರವೇ ಜಾರಿಗೆ ಬರಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಪರಿಷತ್ ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಮಾತನಾಡಿ, ಶಾಲಾ – ಕಾಲೇಜು ವಿದ್ಯಾರ್ಥಿನಿಯರು ಹಾಗೂ ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಮಹಿಳಾ ಪೊಲೀಸ್ ಒಳಗೊಂಡ ಅಕ್ಕಾ ಪಡೆ ಶೀಘ್ರವೇ ಜಾರಿಗೆ ಬರಲಿದೆ. ಈಗಾಗಲೇ ಬೀದರ್ ಜಿಲ್ಲೆಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಅಗಸ್ಟ್ 15ರಿಂದ ಬೆಳಗಾವಿ, ಮೈಸೂರು ಹಾಗೂ ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ ಅಕ್ಕಾ ಪಡೆ ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು.

ಕೆಲವು ಸಮುದಾಯ ಮತ್ತು ಪಂಗಡಗಳಲ್ಲಿ ಆಚರಣೆಯಲ್ಲಿರುವ ಸಾಮಾಜಿಕ ಪದ್ಧತಿಗಳಿಂದಾಗಿ ಬಾಲ್ಯವಿವಾಹಗಳು ನಡೆಯುತ್ತಿದ್ದು, ಇದರಿಂದಾಗಿ ಬಾಲಗರ್ಭಿಣಿಯರ ಸಂಖ್ಯೆ ಹೆಚ್ಚಾಗುತ್ತಿದೆ. ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಬಾಲಗರ್ಭಿಣಿಯರ ಸಂಖ್ಯೆ ಹೆಚ್ಚಾಗುತ್ತಿದೆ. ಬಾಲ್ಯವಿವಾಹ ಸಾಮಾಜಿಕ ಪಿಡುಗಾಗಿದ್ದು, ಇದನ್ನು ಬೇರುಮಟ್ಟದಿಂದ ಕಿತ್ತೊಗೆಯಬೇಕು. ಬಾಲ್ಯವಿವಾಹ ತಡೆಗಟ್ಟಲು ಸರ್ಕಾರ ಸರ್ವಸನ್ನದ್ಧವಾಗಿದ್ದು, ಇದಕ್ಕೆ ಎಲ್ಲರ ಸಹಕಾರವೂ ಅಗತ್ಯ ಎಂದು ಹೇಳಿದರು.

ಬಾಲ್ಯವಿವಾಹಗಳನ್ನು ತಡೆಗಟ್ಟಲು ಸರ್ಕಾರ ಈಗಾಗಲೇ ಕಾಯ್ದೆಯನ್ನು ಜಾರಿಗೆ ತಂದಿದೆ. ನಮ್ಮ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ಮಕ್ಕಳ ರಕ್ಷಣಾ ಸಮಿತಿ (ಸಿಡಬ್ಲ್ಯುಸಿ) ಕಾರ್ಯನಿರ್ವಹಿಸುತ್ತಿದ್ದು, ಬೆಂಗಳೂರಿನಲ್ಲಿ 4 ಕೇಂದ್ರಗಳು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ತಲಾ ಒಂದು ಸಿಡಬ್ಲ್ಯುಸಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದರು.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...