ಬೆಂಗಳೂರು: ಮೈಸೂರಿನ ಕೆ ಆರ್ ನಗರ ಮಹಿಳೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೂ ಬಂಧನ ಭೀತಿ ಶುರುವಾಗಿದೆ. ರೇವಣ್ಣ ಮೇಲೆ ಕೇಳಿ ಬಂದಿರುವ ಅಪಹರಣ ಪ್ರಕರಣದಲ್ಲಿಕುಮ್ಮಕ್ಕು ಕೊಟ್ಟ ಆರೋಪ ಭವಾನಿ ರೇವಣ್ಣ ಮೇಲೆ ಇದೆ. ಹೀಗಾಗಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಪಡೆಯಲು ಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿಕೆಯಾಗಿದೆ.
ಕಿಡ್ನಾಪ್ ಪ್ರಕರಣದಲ್ಲಿ ಹೆಚ್‍ಡಿ ರೇವಣ್ಣ ಬಳಿಕ ಭವಾನಿ ರೇವಣ್ಣಗೂ ಸಂಕಷ್ಟ ಎದುರಾಗಿದೆ. ಸಂತ್ರಸ್ತೆಯ ಮಗ ಕೊಟ್ಟ ದೂರಿನಲ್ಲಿ ಭವಾನಿ ಹೆಸರು ಉಲ್ಲೇಖವಾಗಿದ್ದು, ಎಫ್‍ಐಆರ್ ದಾಖಲಾಗಿದೆ. ಈ ಸಂಬಂಧ ಎಸ್‍ಐಟಿ ಎರಡು ಬಾರಿ ನೋಟಿಸ್ ಕೊಟ್ಟರೂ ಉತ್ತರಿಸದೇ ಚಳ್ಳೆಹಣ್ಣು ತಿನ್ನಿಸುತ್ತಿರುವ ಭವಾನಿಗೆ ಬಂಧನದ ಭೀತಿ ಎದುರಾಗಿದೆ. ಹೀಗಾಗಿ ನಿರೀಕ್ಷಣಾ ಜಾಮೀನು ಮೊರೆ ಹೋಗಿದ್ದಾರೆ. ಇಂದು ಜಾಮೀನು ಅರ್ಜಿ ವಿಚಾರಣೆ ಸೆಷನ್ಸ್ ಕೋರ್ಟ್, ನಾಳೆ ಬೆಳಗ್ಗೆ 11 ಗಂಟೆಗೆ ಮುಂದೂಡಿದೆ.
ಮಹಿಳೆಯ ಅಪಹರಣ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
Date:






