ಮಹಿಳೆ ಅಪಹರಣ ಆರೋಪ ಪ್ರಕರಣ: ಹೈಕೋರ್ಟ್ ಮೊರೆ ಹೋದ ಭವಾನಿ ರೇವಣ್ಣ

Date:

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುನ ಪ್ರಜ್ವಲ್ ರೇವಣ್ಣ SIT ವಶದಲ್ಲಿದ್ದಾರೆ. ಇದರ ಬೆನ್ನಲ್ಲೇ ಸಂತ್ರಸ್ತ ಮಹಿಳೆ ಅಪಹರಣ ಆರೋಪ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅವರು ಹೈಕೋರ್ಟ್‌ ಮೊರೆ ಹೋಗಿದ್ದಾರೆ.
ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆ ಅಪಹರಣ ಆರೋಪವನ್ನು ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಹೊತ್ತಿದ್ದಾರೆ. ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್‌ ನೀಡಿದೆ. ಆದರೆ ಭವಾನಿ ಅವರು ತಲೆಮರೆಸಿಕೊಂಡಿದ್ದಾರೆ. ಅವರಿಗೆ ಎಸ್‌ಐಟಿ ತಂಡ ಹುಡುಕಾಟ ನಡೆಸುತ್ತಿದೆ.
ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಪರ ವಕೀಲರು ಜನಪ್ರತಿನಿಧಿ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಆದರೆ ಶುಕ್ರವಾರ ಅರ್ಜಿ ವಜಾಗೊಂಡಿದೆ. ಈ ಹಿನ್ನೆಲೆಯಲ್ಲಿ ಬಂಧನ ಭೀತಿಯಿಂದ ಪ್ರಜ್ವಲ್‌ ತಾಯಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಸೋಮವಾರ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...