ಹಾಸನ: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಇದರ ಬೆನ್ನಲ್ಲೇ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಮತ್ತೊಂದು ನೋಟಿಸ್ ನೀಡಿದೆ. 15-05-24 ರಂದು ನೀಡಿದ ನೋಟಿಸ್‌ಗೆ ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ಸ್ಪಷ್ಟನೆ ನೀಡುವುದಾಗಿ ತಿಳಿಸಿದ್ದೀರಿ.
ಆದರೆ ಈ ಹಿಂದೆ ನೀಡಿದ್ದ ನೋಟಿಸ್‌ಗೆ ನೀವು ಉತ್ತರಿಸಿಲ್ಲ. ಈ ಪ್ರಕರಣದಲ್ಲಿ ನೀವು ವಿಚಾರಣೆಗೆ ಒಳಪಡುವ ಅವಶ್ಯಕತೆ ಇದೆ. ಆದ್ದರಿಂದ ಜೂ.1 ರಂದು ಖುದ್ದು ಹಾಜರಾಗುವಂತೆ ನೋಟಿಸ್ ನೀಡಿದೆ ಮಹಿಳಾ ಅಧಿಕಾರಿಗಳೊಂದಿಗೆ ಜೂನ್ 1 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ಒಳಗೆ ವಿಚಾರಣೆಗೆ ಆಗಮಿಸುತ್ತೇವೆ. ಆ ಸಂದರ್ಭ ಖುದ್ದು ಮನೆಯಲ್ಲಿ ಹಾಜರಿರಬೇಕೆಂದು ಎಸ್‌ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಮಹಿಳೆ ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ಮತ್ತೊಂದು ಎಸ್ ಐಟಿ ನೋಟೀಸ್
Date: