ಮಹಿಳೆ ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ಮಧ್ಯಂತರ ಜಾಮೀನು

0
256

ಬೆಂಗಳೂರು: ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣಗೆ ಮಧ್ಯಂತರ ಜಾಮೀನು ಸಿಕ್ಕಿದೆ.
ಇಂದು ಮಧ್ಯಾಹ್ನ ಒಂದು ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್‌ ಸೂಚಿಸಿದೆ. ಕೋರ್ಟ್ ವಿಚಾರಣೆಯ ಬಳಿಕ 5 ಗಂಟೆಗಳ ಕಾಲ ಮಾತ್ರ ಅವರನ್ನು ಕಸ್ಟಡಿಯಲ್ಲಿ ಇರಿಸಿಕೊಳ್ಳಬಹುದು ಎಂದು ಆದೇಶಿಸಿದೆ.
ಭವಾನಿ ಅವರನ್ನು ಎಸ್‌ಐಟಿ ಬಂಧಿಸಬಾರದು. ಕೆ ಆರ್ ನಗರ ತಾಲೂಕು ಮತ್ತು ಹಾಸನಕ್ಕೆ ಭವಾನಿ ಪ್ರವೇಶಿಸಿಬಾರದು. ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಕೋರ್ಟ್‌ ಷರತ್ತು ವಿಧಿಸಿದೆ. ಭವಾನಿ ವಿಚಾರಣೆಗೆ ಹಾಜರಾಗದಿದ್ದಕ್ಕೆ ಬಂಧನ ವಾರೆಂಟ್ ಜಾರಿ ಮಾಡಲಾಗಿದೆ. ಈ ಆದೇಶ ಅಮಾನತಿನಲ್ಲಿ ಇಡಲಾಗಿದೆ ಎಂದು ಹೇಳಿದ ಹೈಕೋರ್ಟ್‌ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿತು.