ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ
ಮಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಗಡೀಪಾರು ಆದೇಶ ಕುರಿತ ಹೈಕೋರ್ಟ್ ವಿಚಾರಣೆಯಲ್ಲಿ ಮಧ್ಯಂತರ ತಡೆಯಾಜ್ಞೆ ಹೊರಡಿಸಿದೆ. ನ್ಯಾಯಾಲಯ ಪ್ರತಿವಾದಿಗಳಿಗೆ ನೋಟೀಸ್ ನೀಡಿದ್ದು, ಮುಂದಿನ ವಿಚಾರಣೆಯನ್ನು ಅಕ್ಟೋಬರ್ 8ಕ್ಕೆ ಮುಂದೂಡಲಾಗಿದೆ.ಇದರಿಂದ, ಮಹೇಶ್ ಶೆಟ್ಟಿ ತಾತ್ಕಾಲಿಕವಾಗಿ ಸ್ಥಳಾಂತರಗೊಳ್ಳುವುದಿಲ್ಲ.
ಗಡಿಪಾರು ಆದೇಶ ರದ್ದು ಕೋರಿ ಕರ್ನಾಟಕ ಹೈಕೋರ್ಟ್‌ಗೆ ತಿಮರೋಡಿ ಅರ್ಜಿ ಸಲ್ಲಿಸಿದ್ದರು. ನ್ಯಾ. ಸಿ.ಎಂ.ಪೂನಚ್ಚ ಅವರ ಏಕಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿ ಆದೇಶ ಹೊರಡಿಸಿದೆ. ಅಕ್ಟೋಬರ್ 8 ರವರೆಗೆ ಗಡೀಪಾರು ಮಾಡಿ ಉಪವಿಭಾಗಾಧಿಕಾರಿ ನೀಡಿರುವ ಆದೇಶ ಜಾರಿಗೊಳಿಸದಂತೆ ಆದೇಶಿಸಿದೆ. ಗಡೀಪಾರು ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.