ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು
ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ನಾಯಕ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷದ ಅವಧಿಗೆ ಗಡಿಪಾರು ಮಾಡಲಾಗಿದೆ.
ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಸೆಪ್ಟೆಂಬರ್ 20ರಂದು ಈ ಕುರಿತು ಆದೇಶ ಹೊರಡಿಸಿದ್ದು, ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಲು ಕ್ರಮ ಕೈಗೊಳ್ಳಲಾಗಿದೆ.
ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಈಗಾಗಲೇ ಸುಮಾರು 32 ಪ್ರಕರಣಗಳು ದಾಖಲಾಗಿದ್ದು, ಇದನ್ನು ಆಧರಿಸಿ ಅವರನ್ನು ಗಡಿಪಾರು ಮಾಡಲು ನಿರ್ಧರಿಸಲಾಗಿದೆ.
ಧರ್ಮಸ್ಥಳ ಬುರುಡೆ ಪ್ರಕರಣ ಹಾಗೂ ಶವ ಹೂತಿಟ್ಟ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ತಿಮರೋಡಿ ಆಶ್ರಯ ನೀಡಿದ್ದರು ಎಂಬ ಆರೋಪವೂ ಎದುರಾಗಿದೆ. ಅಲ್ಲದೆ ಹಲವು ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ ತಿಮರೋಡಿ ಹಿಂದೆ ಹಲವು ಬಾರಿ ವಿವಾದಕ್ಕೂ ಕಾರಣರಾಗಿದ್ದರು.