ಕೊರೊನಾ ಸೋಂಕಿನಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಈಗ ಸಂಪೂರ್ಣ ಗುಣಮುಖರಾಗಿದ್ದಾರೆ. ನಿನ್ನೆ ಎರಡನೇ ಬಾರಿ ನಡೆಸಿದ ಗಂಟಲು ದ್ರವ ಹಾಗೂ ರಕ್ತ ಪರೀಕ್ಷೆಯಲ್ಲಿ ಕೋವಿಡ್ ನೆಗೆಟಿವ್ ಬಂದಿದೆ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಕಳೆದ ಮಂಗಳವಾರ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಆರಂಭದ ಎರಡು ದಿನ ಮಾತ್ರ ಜ್ವರ ಕಾಣಿಸಿಕೊಂಡಿಸಿತ್ತು. ಉಳಿದಂತೆ ಸೋಂಕಿನ ಲಕ್ಷಣ ಇರಲಿಲ್ಲ. ಹೀಗಾಗಿ ಸಿದ್ದರಾಮಯ್ಯ ಅವರಿಗೆ ವೈದ್ಯರು ಮತ್ತೊಮ್ಮೆ ಎಲ್ಲ ಪರೀಕ್ಷೆಗಳನ್ನು ಮಾಡಿ ಆಸ್ಪತ್ರೆಯಿಂದ ಬಿಡುಗಡೆ ಮಾಡಿದರು. ಸಿದ್ದರಾಮಯ್ಯ ಅವರು ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಮತ್ತೆ ನಾಲ್ಕು ದಿನಗಳ ಕಾಲ ಹೋಂ ಕ್ವಾರಂಟೈನ್‌ನಲ್ಲಿ ಇರಲಿದ್ದಾರೆ. ಯಾವ ಕಾರ್ಯ ಕರ್ತರು ಮುಖಂಡರು 10 ದಿನ ತಮ್ಮನ್ನು ಭೇಟಿ ಮಾಡ
ಬೇಡಿ ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ ಡಿಸ್ಚಾರ್ಜ್ ವೇಳೆ ಶಾಸಕ ಜಮೀರ್ ಅಹಮದ್ ಖಾನ್ ಜೊತೆಗಿದ್ದರು. ವೈದ್ಯ ಸಿಬ್ಬಂದಿ ಅವರಿಗೆ ಹೂಗುಚ್ಛನೀಡಿ ಬೀಳ್ಕೊಟ್ಟರು.
ಇನ್ನೂ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಗ್ಗೆ ಟ್ವಿಟ್ಟರ್ ನಲ್ಲಿ ಧನ್ಯವಾದ ಸಲ್ಲಿಸಿದ್ದಾರೆ. ಕೊರೊನಾ ಸೋಂಕಿನಿಂದ ಗುಣಮುಖನಾಗಿ ಇಂದು ಆಸ್ಪತ್ರೆಯಿಂದ ಮನೆಗೆ ಮರಳಿದ್ದೇನೆ. ಕಳೆದ 10 ದಿನಗಳಲ್ಲಿ ಜತನದಿಂದ ನನ್ನ ಆರೈಕೆ ಮಾಡಿದ ಮಣಿಪಾಲ್ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗಕ್ಕೆ ನನ್ನ ತುಂಬು ಹೃದಯದ ಧನ್ಯವಾದಗಳು. ವೈದ್ಯರ ಸಲಹೆಯಂತೆ ಒಂದು ವಾರ ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದೇನೆ.
ಕೊರೊನಾ ಸೋಂಕಿನ ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿದ ದಿನದಿಂದ ಕಾಂಗ್ರೆಸ್ ಮತ್ತು ಬೇರೆ ರಾಜಕೀಯ ಪಕ್ಷಗಳ ನಾಯಕರು, ಕಾರ್ಯಕರ್ತರು, ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಎಲ್ಲಕ್ಕಿಂತ ಮಿಗಿಲಾಗಿ ರಾಜ್ಯದ ಜನತೆ ಕಾಳಜಿಯಿಂದ ನನ್ನ ಆರೋಗ್ಯಕ್ಕಾಗಿ ಹಾರೈಸಿದ್ದಾರೆ. ಅವರೆಲ್ಲರಿಗೂ ಆಭಾರಿಯಾಗಿದ್ದೇನೆ, ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.
ಕಿಚ್ಚನ ‘ಫ್ಯಾಂಟಮ್’ ನ ‘ಗಾಂಭೀರ’ ಪಾತ್ರ ರಿವೀಲ್ ..!
ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ದೇಣಿಗೆ ಕೊಡಲು ಮುಂದೆ ಬರ್ತಿರೋರಲ್ಲಿ ಹಿಂದುಗಳೇ ಹೆಚ್ಚು ..!
ಗೋಕುಲಾಷ್ಟಮಿಯಂದೇ ‘ಕೃಷ್ಣನ ಟಾಕೀಸ್’ಗೆ ಸೆನ್ಸಾರ್ ಅಸ್ತು..
ಪ್ರಪಂಚ ಎಷ್ಟೊಂದು ವಿಸ್ಮಯಗಳ ಆಗರ..! ಇಲ್ಲೆಲ್ಲಾ ಒಂದ್ಸಲ ಆದ್ರೂ ಸುತ್ಬೇಕು ರೀ…!