ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಬಂಧನಕ್ಕೆ ಅರೆಸ್ಟ್ ವಾರೆಂಟ್ ಜಾರಿ !

Date:

ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಬಂಧನಕ್ಕೆ ಅರೆಸ್ಟ್ ವಾರೆಂಟ್ ಜಾರಿ !

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿ ವರ್ಷಗಳೆ ಕಳೆದಿವೆ. ಇದೀಗ ಉದ್ಯೋಗಿಗಳಿಗೆ ಮತ್ತು ಸರ್ಕಾರಕ್ಕೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ವಾರೆಂಟ್ ಜಾರಿ ಮಾಡಿರುವುದು ಅಚ್ಚರಿ ಉಂಟು ಮಾಡಿದೆ. ರಾಬಿನ್ ಉತ್ತಪ್ಪ ಸೆಂಚುರಿಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈವೆಟ್ ಲಿಮಿಟೆಡ್ ಎಂಬ ಖಾಸಗಿ ಕಂಪನಿ ನಡೆಸುತ್ತಿದ್ದರು. ಈ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಲವರ ಫಿಎಫ್ ಹಣ ಪಾವತಿಸದೇ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ರಾಬಿನ್ ಉತ್ತಪ್ಪ ಒಡೆತನದ ಕಂಪೆನಿಯು ಸಂಬಳದಲ್ಲಿ ಪಿಎಫ್ ಹಣ ಕಟ್ ಮಾಡಿದ್ದರೂ, ಉದ್ಯೋಗಿಗಳ ಖಾತೆಗೆ ಹಾಕದೇ 23 ಲಕ್ಷ ರೂ. ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪಿಎಫ್ಓ ರಿಜಿನಲ್ ಕಮಿಷನರ್ ಷಡಾಕ್ಷಿರಿ ಗೋಪಾಲ ರೆಡ್ಡಿ ಅವರು,
ರಾಬಿನ್ ಉತ್ತಪ್ಪ ಅವರನ್ನು ಬಂಧಿಸುವಂತೆ ಇದೇ ತಿಂಗಳು ನಾಲ್ಕರಂದು ಪುಲಕೇಶಿ ನಗರ ಪೊಲೀಸರಿಗೆ ಪತ್ರ ಬರೆದಿದ್ದಾರೆ. ಈ ಹಿನ್ನಲೆಯಲ್ಲಿ ರಾಬಿನ್ ಉತ್ತಪ್ಪ ಅವರಿಗೆ ನೋಟಿಸ್ ನೀಡಲು ಪೊಲೀಸರು ಅವರ ಮನೆಗೆ ತೆರಳಿದ್ದರು. ಆದರೆ ಪ್ರಸ್ತುತ ಆ ವಿಳಾಸದಲ್ಲಿ ಅವರು ವಾಸವಿಲ್ಲ. ಹೀಗಾಗಿ ಇದೀಗ ರಾಬಿನ್ ಉತ್ತಪ್ಪ ಅವರಿಗೆ ವಾರೆಂಟ್ ಜಾರಿಗೊಳಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನ...

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು...

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ರಸ್ತೆ...

ಮಧುಮೇಹಿಗಳಿಗೆ ಲವಂಗದ ನೀರು ವರದಾನ

ಮಧುಮೇಹಿಗಳಿಗೆ ಲವಂಗದ ನೀರು ವರದಾನ: ಬೆಳಿಗ್ಗೆ ಈ ನೀರು ಕುಡಿಯುವುದರಿಂದ ಬ್ಲಡ್...