No menu items!
20.9 C
Munich
Monday, May 25, 2026

ಮಾಜಿ ಪ್ರಧಾನಿ ಡಾ ಮನಮೋಹನ್‌ ಸಿಂಗ್‌ ನಿಧನ: ಇಂದು ಅಂತ್ಯಕ್ರಿಯೆ

Must read

ಮಾಜಿ ಪ್ರಧಾನಿ ಡಾ ಮನಮೋಹನ್‌ ಸಿಂಗ್‌ ನಿಧನ: ಇಂದು ಅಂತ್ಯಕ್ರಿಯೆ

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಅಂತ್ಯಕ್ರಿಯೆ ಇಂದು ನಡೆಯಲಿದೆ. ಅದಕ್ಕೂ ಮುನ್ನ ಸಾರ್ವಜನಿಕರು, ಪಕ್ಷದ ಕಾರ್ಯಕರ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.
ವಯೋಸಹಜ ಅನಾರೋಗ್ಯ ಕಾರಣದಿಂದ ಕೊನೆಯುಸಿರೆಳೆದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತಿಮ ಸಂಸ್ಕಾರ ಇಂದು ನಡೆಯಲಿದೆ. ದೆಹಲಿಯಲ್ಲಿರುವ ನಿಗಮ್ ಬೋಧ ಘಾಟ್‌ನಲ್ಲಿ ಬೆಳಗ್ಗೆ 11:45 ಕ್ಕೆ ಅವರ ಅಂತ್ಯಕ್ರಿಯೆ ನಡೆಯಲಿದೆ.
ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನಡೆಸುವ ಬಗ್ಗೆ ಕೇಂದ್ರ ಗೃಹ ಇಲಾಖೆಯು ರಕ್ಷಣಾ ಇಲಾಖೆಗೆ ಪತ್ರ ಬರೆದಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲು ಸಕಲ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಿದೆ.

- Advertisement -spot_img

More articles

- Advertisement -spot_img

Latest article