ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ನ್ಯೂ ಡೆಲ್ಲಿಯ ಮೆಡಿಕಲ್ ಸೆಲ್ ನಿಂದ ಅಧಿಕೃತ ಮಾಹಿತಿ ಬಿಡುಗಡೆ ಮಾಡಲಾಗಿದೆ. ವಯೋಸಹಜ ಖಾಯಿಲೆಯಿಂದ ಬಳತ್ತಿದ್ದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮನಮೋಹನ್ ಸಿಂಗ್ ಅವರು ಮೂಲತಃ ಪಂಜಾಬಿನವರು. 26 ಸೆಪ್ಟೆಂಬರ್ 1937 ರಲ್ಲಿ ಜನಿಸಿದ ಅವರು ಒಬ್ಬ ರಾಜಕಾರಣಿ ಮಾತ್ರವಲ್ಲ ಉತ್ತಮ ಅರ್ಥಶಾಸ್ತ್ರಜ್ಞ, ಶಿಕ್ಷಣತಜ್ಞ ಮತ್ತು ಅಧಿಕಾರಿಯಾಗಿ ಹೆಸರುವಾಸಿಯಾದವರು. ಅವರು 2004 ರಿಂದ 2014 ರವರೆಗೆ ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಜವಾಹರಲಾಲ್ ನೆಹರು, ಇಂದಿರಾ ಗಾಂಧಿ ಮತ್ತು ನರೇಂದ್ರ ಮೋದಿ ನಂತರ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ನಾಲ್ಕನೇ ಪ್ರಧಾನಿಯಾಗಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯರಾಗಿದ್ದ ಸಿಂಗ್ ಭಾರತದ ಮೊದಲ ಸಿಖ್ ಪ್ರಧಾನಿಯಾಗಿದ್ದರು. ಜವಾಹರಲಾಲ್ ನೆಹರೂ ನಂತರ ಪೂರ್ಣ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ ನಂತರ ಮರು ಆಯ್ಕೆಯಾದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮನಮೋಹನ್ ಸಿಂಗ್ ಪಾತ್ರರಾಗಿದ್ದಾರೆ.