ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲ ಎಸ್ ಎಂ ಕೃಷ್ಣ ನಿಧನ

Date:

ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲ ಎಸ್ ಎಂ ಕೃಷ್ಣ ನಿಧನ

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್ ಎಂ ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು ಬೆಳಗಿನ ಜಾವ 2.30 ರ ಸುಮಾರಿಗೆ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು.ಕೆಲಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಇಂದು ಬೆಳಗಿನ ಜಾವ ಕೊನೆಯುಸಿರು ಎಳೆದಿದ್ದಾರೆ.
ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಸಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುವುದು. ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ಬೆಳಗ್ಗೆ ನೆರವೇರಿಸಲಾಗುವುದು ಎಂದು ಎಸ್ ಎಂ ಕೃಷ್ಣ ಅವರ ದೀರ್ಘಕಾಲದ ಒಡನಾಡಿಗಳು, ಸಂಬಂಧಿಗಳು ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌ ಬೆಂಗಳೂರು: ಗ್ಯಾರಂಟಿ...

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್ ಹಾಸನ: ಐತಿಹಾಸಿಕ ಪ್ರಸಿದ್ಧ ಹಾಸನಾಂಬೆ ದೇವಸ್ಥಾನದ...

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್!

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್! ಚಿನ್ನ ಖರೀದಿಗೆ...

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ! ಬೆಂಗಳೂರು:...