ಮಾಜಿ ಸಚಿವ ನಾಗೇಂದ್ರಗೆ ಆ.3ರವರೆಗೆ ನ್ಯಾಯಾಂಗ ಬಂಧನ!

tnit editors
1 Min Read

ಬೆಂಗಳೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ವಾಲ್ಮೀಕಿ ನಿಗಮದ ಹಗರಣ ಬಗೆದಷ್ಟು ಬಯಲಾಗ್ತಿದೆ. ಹಗರಣದ ಸುಳಿಯಲ್ಲಿ ಸಿಲುಕಿರುವ ಮಾಜಿ ಸಚಿವ ನಾಗೇಂದ್ರಗೆ ಆಗಸ್ಟ್‌ 3ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ನಾಗೇಂದ್ರ ಅವರನ್ನು ಇಂದು ಕೋರ್ಟ್ಗೆ ಇ.ಡಿ ಅಧಿಕಾರಿಗಳು ಹಾಜರುಪಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.
ಹಣ ಅಕ್ರಮ ವರ್ಗಾವಣೆಯಲ್ಲಿ ನಾಗೇಂದ್ರ ಪ್ರಮುಖ‌ ಪಾತ್ರ ವಹಿಸಿದ್ದು, ವಿಚಾರಣೆ ಅವಶ್ಯಕತೆ ಇದೆ. ಹೀಗಾಗಿ ಕಸ್ಟಡಿಗೆ ನೀಡಬೇಕೆಂದು ಇಡಿ ಮನವಿ ಸಲ್ಲಿಸಿತ್ತು. ಆದರೆ, ಅವರಿಗೆ ಹೃದಯ ಸಂಬಂಧಿ ಕಾಯಿಲೆ ಇರುವುದರಿಂದ ಚಿಕಿತ್ಸೆಗೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ನಾಗೇಂದ್ರ ಪರ ವಕೀಲರು ಮನವಿ ಮಾಡಿದ್ದಾರೆ. ಹೀಗಾಗಿ ಅವರಿಗೆ ನಾಗೇಂದ್ರ ಬಂಧನ ವಿಧಿಸಲಾಗಿದೆ.

Share This Article