No menu items!
17 C
Munich
Monday, May 25, 2026

ಮಾಜಿ ಸಚಿವ ಬಿ ನಾಗೇಂದ್ರ ಆಪ್ತರ ಮನೆ ಮೇಲೆ ಮತ್ತೆ ಇಡಿ ದಾಳಿ, ಪರಿಶೀಲನೆ!

Must read

 

ಬಳ್ಳಾರಿ:- ಮಾಜಿ ಸಚಿವ ಬಿ ನಾಗೇಂದ್ರ ಅವರ ಆಪ್ತರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ. ನಾಗೇಂದ್ರ ಸಂಬಂಧಿ ಎರ್ರಿಸ್ವಾಮಿ ಮನೆ ಸೇರಿದಂತೆ ಕೆಲ ಆಪ್ತ ಸಹಾಯಕರು ಮತ್ತು ಆಪ್ತರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಪ್ರಕರಣದಲ್ಲಿ ಇಡಿ ಜಾರ್ಜ್ಶೀಟ್ ಸಲ್ಲಿಕೆಗೆ ಸಮಯ ಹತ್ತಿರ ಬಂದಿರುವುದರಿಂದ ಅಧಿಕಾರಿಗಳು ದಾಳಿ ಚುರುಕುಗೊಳಿಸಿದ್ದಾರೆ ಎನ್ನಲಾಗಿದೆ.
ಹಗರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಅಧಿಕಾರಿಗಳು ಕಳೆದ ತಿಂಗಳಷ್ಟೇ ಬೆಂಗಳೂರು, ರಾಯಚೂರು, ಬಳ್ಳಾರಿ ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ ದಾಳಿ ನಡೆಸಿ ಮಾಹಿತಿ ಕಲೆಹಾಕಿದ್ದರು. ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿರುವ ಗಸನಗೌಡ ದದ್ದಲ್ ನಿವಾಸ, ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾಗೇಂದ್ರ ಮನೆ ಮೇಲೂ ದಾಳಿ ನಡೆಸಿದ್ದರು ಎನ್ನಲಾಗಿದೆ.

- Advertisement -spot_img

More articles

- Advertisement -spot_img

Latest article