ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಹೈಕೋರ್ಟ್’ನಿಂದ ರಿಲೀಫ್ ಸಿಕ್ಕಿದೆ. ಹೌದು ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿನ್ನಯಷ್ಟೇ ಕೋರ್ಟ್ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಗೊಳಿಸಿತ್ತು. ಈ ಬೆನ್ನಲ್ಲೇ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಮಧ್ಯಂತರ ಆದೇಶದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಆದೇಶಿಸಿದೆ.
ಮುಂದಿನ ವಿಚಾರಣೆ ತನಕ ಯಡಿಯೂರಪ್ಪ ವಿರುದ್ಧ ಒತ್ತಾಯದ ಕ್ರಮ ಕೈಗೊಳ್ಳುವಂತಿಲ್ಲ. ಒತ್ತಾಯದ ಕ್ರಮ ಕೈಗೊಳ್ಳುವಂತಿಲ್ಲ ಎಂದಿರುವ ನ್ಯಾಯಾಲಯ, ಜೂನ್ 17 ರಂದು ಯಡಿಯೂರಪ್ಪ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚನೆ ನೀಡಿದೆ. ಪೊಲೀಸರು ಸಲ್ಲಿಸಿದ್ದ ಅರ್ಜಿ ಮನ್ನಿಸಿದ ಕೋರ್ಟ್ ಯಡಿಯೂರಪ್ಪಗೆ ಬಂಧನದ ವಾರೆಂಟ್ ಜಾರಿಗೊಳಿಸಿತ್ತು.
ಇನ್ನು ಕೇಸ್ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾ.ಕೃಷ್ಣ ಎಸ್ ದೀಕ್ಷಿತ್ರವರ ಏಕಸದಸ್ಯ ಪೀಠದಲ್ಲಿ ವಿಚಾರಣೆ ಮಾಡಿದ್ದು, ಸಿಆರ್ಪಿಸಿ 41ಎ ಅಡಿ ಮಾ.28ರಂದು ಪೊಲೀಸರು ನೋಟಿಸ್ ನೀಡಿದ್ದರು. ಅದರಂತೆ ಏ.12ರಂದು ಬಿಎಸ್ವೈ ವಿಚಾರಣೆಗೆ ಹಾಜರಾಗಿದ್ದರು. 2ನೇ ನೋಟಿಸ್ಗೆ ಅವರು ಹಾಜರಾಗಿಲ್ಲ. ಜೂ.17ರಂದು ಹಾಜರಾಗುವುದಾಗಿ ಬಿಎಸ್ವೈ ಉತ್ತರಿಸಿದ್ದಾರೆ. ಹೀಗಾಗಿ ಬಂಧಿಸಿ ತನಿಖೆಗೊಳಪಡಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪರನ್ನು ಬಂಧಿಸದಂತೆ ಹೈಕೋರ್ಟ್ ಆದೇಶ !
Date: