ಮಾಜಿ ಸಿಎಂ ಸಿದ್ದರಾಮಯ್ಯಗೆ ಸ್ಪೀಕರ್ ‘ಖಡಕ್’ ಪತ್ರ ! ಯಾಕೆ ಗೊತ್ತಾ?

Date:

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಸ್ಪೀಕರ್ ರಮೇಶ್ ಕುಮಾರ್ ಅವರು ಖಡಕ್ ಆಗಿ ಪತ್ರ ಬರೆದಿದ್ದಾರೆ.

ರಾಜ್ಯ ಸಮ್ಮಿಶ್ರ ಸರ್ಕಾರದ ಭಾಗವಾಗಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ತಾವು ಕಳೆದ ಒಂದು ವರ್ಷದಿಂದ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದೀರಿ. ಪ್ರಾಮಾಣಿಕವಾಗಿ ನನ್ನ ಅನಿಸಿಕೆಯನ್ನು ನಿಮ್ಮ ಮುಂದೆ ಇಡುತ್ತಿದ್ದೇನೆ. ನೀವು ಶಾಸಕಾಂಗ ಪಕ್ಷದ ನಾಯಕನಂತೆ ನಡೆದುಕೊಳ್ಳದೆ ಕೆಲವೇ ಕೆಲವು ತಮ್ಮ ಆಪ್ತ ಶಾಸಕರ ಪಾಲಿನ ನಾಯಕನಂತೆ ನಡೆದುಕೊಳ್ಳುತ್ತಿದ್ದೀರಿ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾವು ಹಾಗೇ ನಡೆದುಕೊಳ್ಳುತ್ತಿದ್ದೀರೋ ಅಥವಾ ತಮ್ಮ ಆಪ್ತ ವಲಯ ಹಾಗೆ ಬಿಂಬಿಸುತ್ತಿದೆಯೋ ಗೊತ್ತಿಲ್ಲ.

ಎರಡೆರಡು ಬಾರಿ ಉಪ ಮುಖ್ಯಮಂತ್ರಿಯಾಗಿ, ವಿರೋಧ ಪಕ್ಷದ ನಾಯಕನಾಗಿ 5 ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಅಪಾರವಾದ ರಾಜಕೀಯ ಹಾಗೂ ಆಡಳಿತಾತ್ಮಕ ಅನುಭವ ತಮಗಿದೆ. ಸಮ್ಮಿಶ್ರ ಸರ್ಕಾರದಂತಹ ಸಂಕಷ್ಟದ ಸ್ಥಿತಿಯಲ್ಲಿ ಹೇಗೆ ನಡೆದುಕೊಂಡರೆ ಉತ್ತಮ ಎಂಬ ತಿಳುವಳಿಕೆಯು ತಮಗಿದೆ ಎಂದು ಸ್ಪೀಕರ್ ಬರೆದಿದ್ದಾರೆ.

ಈ ಸಂದರ್ಭದಲ್ಲಿ ಸರ್ಕಾರಕ್ಕೆ ಹಾಗೂ ತಮ್ಮ ಪಕ್ಷಕ್ಕೆ ತಮ್ಮ ಅನುಭವದ ಅವಶ್ಯಕತೆ ದೊಡ್ಡ ಮಟ್ಟದಲ್ಲಿ ಬೇಕಿದೆ ಎನ್ನುವುದು ನನ್ನ ಅಭಿಪ್ರಾಯ ಎಂದು ಪತ್ರದಲ್ಲಿ ಬರೆದಿದ್ದಾರೆ.

ಎಲ್ಲಾ ಕಾಂಗ್ರೆಸ್ ಶಾಸಕರ ನಾಯಕನಾಗಿ ಹಾಗೂ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿಯ ಅಧ್ಯಕ್ಷರಾಗಿ ಬಹು ದೊಡ್ಡ ಜವಾಬ್ದಾರಿ ತಮ್ಮ ಮೇಲಿದೆ. ಅವೆಲ್ಲವನ್ನು ನಿರ್ವಹಿಸುವ ಮಹತ್ತರ ಜವಾಬ್ದಾರಿ ತಮ್ಮ ಮೇಲಿದ್ದು ಅದನ್ನ ಯಶಸ್ವಿಯಾಗಿ ನಿರ್ವಹಿಸಬಲ್ಲಿರಿ ಎಂಬುದು ನನ್ನ ನಂಬಿಕೆ ಎಂದು ರಮೇಶ್ ಕುಮಾರ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...