ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಜೆಡಿಎಸ್ ಬಿಡಲು ಅಹಿಂದ ಕಾರಣವಾಗಿದೆ. ಜೆಡಿಎಸ್ ನಲ್ಲಿ ಸಿದ್ದರಾಮಯ್ಯ ಪಕ್ಷಾತೀತವಾಗಿ ಅಹಿಂದ ಕಟ್ಟಲು ಮುಂದಾಗಿದ್ದರು. ಆ ಸಮಯದಲ್ಲಿ ಹೆಚ್.ಡಿ. ದೇವೇಗೌಡರು ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಸಿದ್ದರಾಮಯ್ಯ ಜೆಡಿಎಸ್ ಬಿಟ್ಟು ಬಂದಿದ್ದರು ಎಂದು ಅಮರೇಗೌಡ ಬಯ್ಯಾಪೂರ್ ಹೇಳಿದ್ದಾರೆ.
ನಾನು ಸಿದ್ದರಾಮಯ್ಯ ಅವರ ಗರಡಿಯಲ್ಲೇ ಪಳಗಿದ್ದೇನೆ. ಜೆಡಿಎಸ್ ಹಾಗೂ ಕಾಂಗ್ರೆಸ್ ತತ್ವ ಸಿದ್ಧಾಂತ ಇರುವ ಪಕ್ಷವಾಗಿದೆ. ಜೆಡಿಎಸ್ ನಲ್ಲಿ ಸಿದ್ದರಾಮಯ್ಯನವರಿಗೆ ಸಮಸ್ಯೆಗಳು ಉಂಟಾಗಿದ್ದವು.ಅಹಿಂದ ಸಮಾಜಕ್ಕೆ ನ್ಯಾಯ ಕೊಡಲು ಸಿದ್ದರಾಮಯ್ಯ ಜೆಡಿಎಸ್ ಬಿಟ್ಟು ಬಂದಿದ್ದರು ಎಂದರು.
ಇನ್ನು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಅಲ್ಲ, ರಾಷ್ಟ್ರಪತಿ ಸ್ಥಾನ ಕೊಡ್ತೀನಿ ಅಂದ್ರೂ ಬಿಜೆಪಿಗೆ ಹೋಗಲ್ಲ. ಸಿದ್ದರಾಮಯ್ಯ ಕಾಂಗ್ರೆಸ್ ಬಿಡೋದು ಒಂದೇ, ರಾತ್ರಿ 12 ಗಂಟೆಗೆ ಸೂರ್ಯ ಉದಯಿಸೋದು ಒಂದೇ ಎಂದು ಹೇಳಿದರು