ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಾವಿಯೊಳಗಿನ ಕಪ್ಪೆ ಇದ್ದಂತೆ.

Date:

ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ಪಕ್ದದ ಸಭೆಯಲ್ಲಿ ಮಾತನಾಡಿದ್ದ ರಮೇಶ್ ಕುಮಾರ್ ‘ಕೋಮುವಾದಿ ಪಕ್ಷವನ್ನು ಎದುರಿಸಲು ನಾವೆಲ್ಲರೂ ಮಾನಸಿಕವಾಗಿ ಸಿದ್ಧರಾಗಬೇಕಿದೆ. ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ. ಎಲ್ಲಾ ಕೇಸರಿಕರಣವಾದರೆ ಮತ್ತಷ್ಟು ಕಷ್ಟ ಎದುರಾಗುತ್ತದೆ. ಮೋದಿ, ಶಾ ಎಲ್ಲಾ ಸಂಸ್ಥೆಗಳಿಗೆ ಕೈ ಹಾಕಿದ್ದಾರೆ. ಇಡೀ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ನಾಶ ಮಾಡುತ್ತಿದ್ದಾರೆ” ಎಂದು ದೂರಿದ್ದರು.

ಇದಕ್ಕೆ ತಿರುಗೇಟನ್ನು ನೀಡಿರುವ ಚಿಕ್ಕಮಗಳೂರು ಶಾಸಕ C T ರವಿ ರಮೇಶ್ ಕುಮಾರ್ ಅವರನ್ನು ‘ಬಾವಿಯೊಳಗಿನ ಕಪ್ಪೆಯಂತೆ’ ಎಂದು ಲೇವಡಿ ಮಾಡಿದ್ದಾರೆ.
ರಮೇಶ್ ಕುಮಾರ್ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಮುಖಂಡ C T ರವಿ..


‘ಕಾಂಗ್ರೆಸ್ಸಿನ ಶಾಸಕ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಾವಿಯೊಳಗಿನ ಕಪ್ಪೆಯಂತೆ. ಅವರ ಹೇಳಿಕೆ ಯಾವತ್ತೂ, ನೆಹರೂ, ಇಂದಿರಾ, ರಾಜೀವ್, ಸೋನಿಯಾ ಮತ್ತು ರಾಹುಲ್ ಗಾಂಧಿಯವರಿಗೆ ಮಾತ್ರ ಸೀಮಿತವಾಗಿರುತ್ತದೆ, ಆ ಜಗತ್ತಿನಿಂದ ಹೊರಬಂದು, ಬಲಾಢ್ಯ ದೇಶ ಕಟ್ಟುವ ವಿಚಾರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕೊಡುಗೆಯೇನು ಎನ್ನುವುದನ್ನು ಮೊದಲು ಅರಿತುಕೊಳ್ಳಲಿ’ ಎಂದು ರಮೇಶ್ ಕುಮಾರ್ ಅವರಿಗೆ ಸಲಹೆಯನ್ನು ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...