ಐಪಿಎಲ್ ರ ಆವೃತ್ತಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ವಿರುದ್ಧ ಶನಿವಾರ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೋಲುಂಡಿದ್ದು, ಇದರ ಬೆನ್ನಲ್ಲೇ ಮುಂಬೈ ತಂಡದ ನಾಯಕ ರೋಹಿತ್ ಶರ್ಮಾಗೆ ಬರೋಬ್ಬರಿ 12 ಲಕ್ಷ ರೂ. ದಂಡ ವಿಧಿಸಲಾಗಿದೆ.
ಮೂರು ಬಾರಿ ಐಪಿಎಲ್ ಟೈಟಲ್ ಚಾಂಪಿಯನ್ ಆಗಿರುವ ಮುಂಬೈ ತಂಡದ ನಾಯಕನಾಗಿರುವ ರೋಹಿತ್ ಶರ್ಮಾ,
ಶನಿವಾರ ನಡೆದ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ನಡೆಸಿದ್ದ ಪರಿಣಾಮ ಮ್ಯಾಚ್ ರೆಫ್ರಿ ಮುಂಬೈ ತಂಡದ ನಾಯಕನಾಗಿರುವ ರೋಹಿತ್ ಶರ್ಮಾಗೆ 12 ಲಕ್ಷ ದಂಡ ವಿಧಿಸಿದ್ದಾರೆ. ಈ ಮೂಲಕ ಟೂರ್ನಿಯಲ್ಲಿ ಮೊದಲ ಬಾರಿಗೆ ದಂಡ ಪಡೆಯುತ್ತಿರುವ ತಂಡ ಎಂಬ ಕುಖ್ಯಾತಿಯನ್ನು ಮುಂಬೈ ತಂಡ ಪಡೆದುಕೊಂಡಿದೆ.