No menu items!
29.6 C
Munich
Thursday, June 18, 2026

ಮಾತನಾಡಲು ಬಾರದ ಇವರು ಅಡುಗೆ ಮಾಡೋದಕ್ಕೆ ಲಾಯಕ್ಕು !

Must read

ದಾವಣಗೆರೆ: ದಾವಣಗೆರೆ ಬಂಟರ ಭವನದಲ್ಲಿ ನಡೆದ ಕಾಂಗ್ರೆಸ್‌ ಜನಪ್ರತಿನಿಧಿಗಳು, ಮುಖಂಡರ ಸಭೆಯಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ನಾಲಿಗೆ ಹರಿಬಿಟ್ಟಿದ್ದಾರೆ. ಹೌದು ದಾವಣಗೆರೆ ಬಿಜೆಪಿ ಮಹಿಳಾ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್‌ ಅವರನ್ನು ಟೀಕಿಸುವ ಭರದಲ್ಲಿ ಶಾಮನೂರು ಈ ಹೇಳಿಕೆ ನೀಡಿದ್ದಾರೆ. ದಾವಣಗೆರೆ ಬಿಜೆಪಿ ಅಭ್ಯರ್ಥಿ ದಾವಣಗೆರೆಯಿಂದ ಗೆದ್ದು ಮೋದಿಗೆ ಕಮಲದ ಹೂ ಅರ್ಪಿಸುತ್ತೇನೆ ಅಂತಾರೆ. ಮೊದಲು ದಾವಣಗೆರೆ ಜಿಲ್ಲೆಯ ಸಮಸ್ಯೆ ತಿಳಿಯಲಿ ಎಂದು ಶಾಮನೂರು ಟಾಂಗ್‌ ಕೊಟ್ಟಿದ್ದಾರೆ.
ಮಾತನಾಡಲು ಬಾರದ ಇವರು ಅಡುಗೆ ಮಾಡೋದಕ್ಕೆ ಲಾಯಕ್ಕು. ಸಾರ್ವಜನಿಕ ಸಭೆಗಳಲ್ಲಿ ಮಾತನಾಡುವ ಶಕ್ತಿ ಅವರಿಗಿಲ್ಲ. ಹೀಗಾಗಿ ನಮ್ಮ ‘ಕೈ’ ಮೇಲಿದೆ ಎಂಬುದನ್ನು ನಾವು ತೋರಿಸಬೇಕು ಎಂದು ಬಿಜೆಪಿ ಅಭ್ಯರ್ಥಿಯನ್ನು ಟೀಕಿಸುವ ಭರದಲ್ಲಿ ಶಾಮನೂರು ಈ ಹೇಳಿಕೆ ನೀಡಿದ್ದಾರೆ.
ವಿರೋಧ ಪಕ್ಷದವರು ಮೋದಿ.. ಮೋದಿ ಅಂತಾರೆ. ಆದರೆ ಮೋದಿ ಕರ್ನಾಟಕಕ್ಕೆ ಏನು ಕೊಟ್ಟಿದ್ದಾರೆ? ನಮ್ಮ ರಾಜ್ಯಕ್ಕೆ ಬರಬೇಕಾದ ಹಣ ನೀಡದೇ ಅನ್ಯಾಯ ಮಾಡಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

- Advertisement -spot_img

More articles

- Advertisement -spot_img

Latest article