ಮಾತುಕತೆ ಏನಾಗಿದೆ? ಹೈಕೋರ್ಟ್ ಸೂಚನೆ ಬೆನ್ನಲ್ಲೇ ಸಾರಿಗೆ ನೌಕರರ ಮುಷ್ಕರ ವಾಪಸ್!

Date:

ಮಾತುಕತೆ ಏನಾಗಿದೆ? ಹೈಕೋರ್ಟ್ ಸೂಚನೆ ಬೆನ್ನಲ್ಲೇ ಸಾರಿಗೆ ನೌಕರರ ಮುಷ್ಕರ ವಾಪಸ್!

ಬೆಂಗಳೂರು:- ಹೈಕೋರ್ಟ್‌ ಛೀಮಾರಿ ಬೆನ್ನಲ್ಲೇ ಸಾರಿಗೆ ನೌಕರರು ಮುಷ್ಕರ ವಾಪಸ್‌ ತೆಗೆದುಕೊಂಡಿದ್ದಾರೆ.

ಕೆಎಸ್‌ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ. ಈ ಬಗ್ಗೆ ಸಮಿತಿ ಪರ ವಕೀಲರು ಹೈಕೋರ್ಟ್‌ಗೆ ಸ್ಪಷ್ಟನೆ ನೀಡಿದ್ದಾರೆ.

ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್‌ನ ಸಿಜೆ ವಿಭು ಬಕ್ರು, ನ್ಯಾ.ಸಿ.ಎಂ ಜೋಷಿ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ನಡೆಯಿತು. ಸರ್ಕಾರಿ ಪರ ವಕೀಲರಾಗಿ ಎಜಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು.

ನಿನ್ನೆ ಸಾರಿಗೆ ಇಲಾಖೆಯ ಅಧಿಕಾರಿಗಳು, ಸಂಘಟನೆಯೊಂದಿಗೆ ಸಭೆ ಮಾಡಲಾಗಿದೆ. ನಿನ್ನೆ ರಾತ್ರಿಯಷ್ಟೇ ನೋಟಿಸ್ ಸಿಕ್ಕಿದೆ. ರಾಜಿ ಸಂಧಾನಕ್ಕೆ ಪ್ರಯತ್ನಗಳನ್ನೂ ಮಾಡಲಾಗುತ್ತಿದೆ ಎಂದು ತಿಳಿಸಿದ್ರು, ಇದಕ್ಕೆ ಮಾತುಕತೆ ಏನಾಗಿದೆ? ಎಂದು ಹೈಕೋರ್ಟ್ ಪ್ರಶ್ನಿಸಿತು. ಅದಕ್ಕೆ ಎಜಿ, ಈವೆರೆಗೆ ಸರ್ಕಾರ ನಡೆಸಿದ ಮಾತುಕತೆಗಳ ವಿವರ ನೀಡಿದರು. ಮುಂದುವರಿದು… ಇಂಡಸ್ಟ್ರಿಯಲ್ ಡಿಸ್ಪ್ಯೂಟ್ ಕಾಯ್ದೆಯಂತೆ ಸಂಧಾನ ಸಭೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ರು

ಬಳಿಕ ಸಾರಿಗೆ ಸಂಘಟನೆಗಳ ಪರ ವಕೀಲರನ್ನ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿತು. ಸಿಜೆ ವಿಭು ಬಕ್ರು, ನ್ಯಾ.ಸಿ.ಎಂ.ಜೋಷಿ ನೇತೃತ್ವದ ಪೀಠ ನ್ಯಾಯಾಂಗ ನಿಂದನೆಯ ಎಚ್ಚರಿಕೆಯನ್ನೂ ನೀಡಿತು.

ಎಸ್ಮಾ ಜಾರಿಯಾಗಿದೆ. ಮುಷ್ಕರ ನಿಂತಿರುವ ಬಗ್ಗೆ ನಾಳೆ ಮಾಹಿತಿ ನೀಡಬೇಕು. ಇಲ್ಲವಾದರೆ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಲಾಗುವುದು. ಸಾರಿಗೆ ಸಂಘಟನೆಗಳ ಕ್ರಿಯಾ ಸಮಿತಿ ಪದಾಧಿಕಾರಿಗಳ ಬಂಧನಕ್ಕೆ ಆದೇಶಿಸಲಾಗುವುದು. ನಿಮ್ಮ ಸಮಸ್ಯೆ ಇದ್ದರೆ ಸರ್ಕಾರದೊಂದಿಗೆ ಚರ್ಚಿಸಿ ಬಗೆಹರಿಸಿಕೊಳ್ಳಿ, ಜನಸಾಮಾನ್ಯರನ್ನ ಒತ್ತೆಯಾಗಿರಿಸುವುದನ್ನ ಕೋರ್ಟ್‌ ಸಹಿಸಲ್ಲ ಎಂದು

ಎಚ್ಚರಿಸಿತು

 

Share post:

Subscribe

spot_imgspot_img

Popular

More like this
Related

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42 ಭಾರತೀಯರು ಸಾವು

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42...

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ ಏರಿಕೆ

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ...

ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಅಭಿಪ್ರಾಯವನ್ನು ಹಲವು ಬಾರಿ ಹೇಳಿದ್ದೇನೆ: ಡಿಕೆ ಸುರೇಶ್

ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಅಭಿಪ್ರಾಯವನ್ನು ಹಲವು ಬಾರಿ ಹೇಳಿದ್ದೇನೆ:...

ಬ್ಲಾಕ್ ಕಾಫಿ ಕುಡಿಯುವ ಅಭ್ಯಾಸ ನಿಮಗಿದ್ಯಾ..? ಹಾಗಿದ್ರೆ ಈ ಸ್ಟೋರಿ ಓದಿ

ಬ್ಲಾಕ್ ಕಾಫಿ ಕುಡಿಯುವ ಅಭ್ಯಾಸ ನಿಮಗಿದ್ಯಾ..? ಹಾಗಿದ್ರೆ ಈ ಸ್ಟೋರಿ ಓದಿ ಅನೇಕರು...