No menu items!
12.1 C
Munich
Saturday, September 12, 2026

ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್

Must read

ಬೆಂಗಳೂರು: ನೀತಿ ಸಂಹಿತೆ ಉಲ್ಲಂಘನೆ ಆರೋುದಡಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಆದೇಶ ಹೊರಡಿಸಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಮೂರ್ತಿ ಜೆ.ಪ್ರೀತ್ ಅವರು ಆದೇಶಿಸಿದ್ದಾರೆ. ಚುನಾವಣಾ ಅಧಿಕಾರಿಗಳ ಅನುಮತಿಯಿಲ್ಲದೇ ಬೆಳಗಾವಿಯ ಹಿಂಡಲಗಾದಲ್ಲಿ ಅಂಗನವಾಡಿ ಕಾರ್ಯಕರ್ತೆ ಯರೊಂದಿಗೆ ಸಭೆ ನಡೆಸಿದ ಆರೋಪ ಕೇಳಿಬಂದಿತ್ತು. ಈ ಹಿನ್ನಲೆ ಚುನಾವಣಾ ಅಧಿಕಾರಿ‌ ಮಹಾಂತೇಶ್ ಅವರು ಖಾಸಗಿ ದೂರು ದಾಖಲಿಸಿದ್ದರು. ಇದೀಗ ಏಪ್ರಿಲ್.30ರಂದು ಕೋರ್ಟ್ಗೆ ಹಾಜರಾಗುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ಗೆ ಸಮನ್ಸ್ ಜಾರಿಗೆ ಕೋರ್ಟ್ ಆದೇಶಿಸಿದೆ.

- Advertisement -spot_img

More articles

- Advertisement -spot_img

Latest article