ಮಾನವೀಯತೆ ಮೆರೆದ ಬೆಂಗಳೂರು ಪೊಲೀಸರು!
ಬೆಂಗಳೂರಿನ ಹಲಸೂರು ಗೇಟ್ ಪೊಲೀಸರು ಮಾನವೀಯತೆ ಮೆರೆದಿದ್ದು, ಪೊಲೀಸರ ಈ ನಡೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
ಕಾರ್ಪೊರೇಷನ್ ಸರ್ಕಲ್ ನಲ್ಲಿ ಆಯತಪ್ಪಿ ಬಿದ್ದಿದ್ದ ವ್ಯಕ್ತಿಗೆ ತೀವ್ರ ಪೆಟ್ಟಾಗಿತ್ತು. ಕೂಡಲೇ ಸ್ಥಳಕ್ಕೆ ಹಲಸೂರು ಗೇಟ್ ಪೊಲೀಸರು ಬಂದು ಗಾಯದಿಂದ ಬಳಲಾಡುತ್ತಿದ್ದ ವ್ಯಕ್ತಿಯ ಸಹಾಯಕ್ಕೆ ನಿಂತಿದ್ದಾರೆ.
ಒಂದು ಗಂಟೆಯಿಂದ ಆಂಬ್ಯುಲೆನ್ಸ್ ಗೆ ಕರೆ ಮಾಡಿದ್ರು 108 ವಾಹನ ಬರಲಿಲ್ಲ. ಹೀಗಾಗಿ ಪೊಲೀಸರೇ ಸ್ಥಳದಲ್ಲಿ ನಿಂತು ಗಾಯಾ ಆಗಿದ್ದ ವ್ಯಕ್ತಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಎರಡು ದಿನಗಳಿಂದ ಊಟ ನೀರು ಇಲ್ಲದೇ ವ್ಯಕ್ತಿ ಪರದಾಟ ನಡೆಸಿದ್ದ. ಗಾಯಾಳು ಪರಿಸ್ಥಿತಿ ಕಂಡು ಟೀ, ಬನ್ನು, ಮತ್ತು ತಿಂಡಿ ವ್ಯವಸ್ಥೆ ಮಾಡಿ ಪೊಲೀಸರು ಮಾನವೀಯ ಕಾರ್ಯ ಮಾಡಿದ್ದಾರೆ.