No menu items!
18 C
Munich
Friday, July 3, 2026

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್ ಹತ್ಯೆ!

Must read

ಬೆಂಗಳೂರು : ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯ ಸಮೀಪದ ಐಟಿಸಿ ರಸ್ತೆಯಲ್ಲಿ ರೌಡಿ ಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ‌ವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಕಾರ್ತಿಕೇಯನ್ (40) ಹತ್ಯೆಯಾದ ರೌಡಿ ಶೀಟರ್. ನಿನ್ನೆ‌ ಸಂಜೆ ಸುಮಾರಿಗೆ ಮಾರಕಾಸ್ತ್ರಗಳೊಂದಿಗೆ ಬಂದ ಹಂತಕರು ಕಾರ್ತಿಕೇಯನ್‌ನನ್ನ ನಡು ರಸ್ತೆಯಲ್ಲಿ ಕೊಚ್ಚಿ ಕೊಂದು ಪರಾರಿಯಾಗಿದ್ದಾರೆ.
ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಳೇ ದ್ವೇಷದ ಹಿನ್ನೆಲೆ ಕೃತ್ಯ ನಡೆದಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಬಾಣಸವಾಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -spot_img

More articles

- Advertisement -spot_img

Latest article