ಹಾಸನ: ಹಾಸನದ ಹೊರವಲಯದಲ್ಲಿ ಪುಡಿರೌಡಿಗಳ ಅಟ್ಟಹಾಸಕ್ಕೆ ಯುವಕ ಸತೀಶ್ ಬಲಿಯಾಗಿದ್ದಾನೆ. ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಮನಸೋ ಇಚ್ಚೆ ಹಲ್ಲೆ ಮಾಡಿದ್ರು. ಸಾವು-ಬದುಕಿನ ಮಧ್ಯೆ ಹೋರಾಡ್ತಿದ್ದ ಸತೀಶ್, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಆಸ್ಪತ್ರೆ ಬಳಿ ಪೋಷಕರು ಆಕ್ರಂದನ ಮುಗಿಲು ಮುಟ್ಟಿತ್ತು. ಇನ್ನೂ ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆಯೇ ಆರೋಪಿಗಳು ಹಲ್ಲೆ ಯತ್ನಿಸಿದ್ದಾರೆ. ಆಗ ಆತ್ಮ ರಕ್ಷಣೆಗಾಗಿ ಪ್ರಮುಖ ಆರೋಪಿ ರಾಜು ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.