ಮಾಲೆಂಗಾವ್ ಸ್ಫೋಟ ಪ್ರಕರಣ: ಪ್ರಗ್ಯಾ ಠಾಕೂರ್ ಸೇರಿ ಎಲ್ಲ ಆರೋಪಿಗಳು ಖುಲಾಸೆ!
ನವದೆಹಲಿ: 2008ರ ಮಾಲೇಗಾಂವ್ ಸ್ಫೋಟ ಪ್ರಕರಣದ ತೀರ್ಪು ಇಂದು ಪ್ರಕಟಗೊಂಡಿದ್ದು, ಈ ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯವು ಇಂದು ತೀರ್ಪು ಪ್ರಕಟಿಸಿದ್ದು, ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಠಾಕೂರ್ ಅವರನ್ನು ಖುಲಾಸೆಗೊಳಿಸಲಾಗಿದೆ.
ಏಪ್ರಿಲ್ 19ರಂದು ಪ್ರಕರಣದ ವಿಚಾರಣೆ ಮುಗಿಸಿದ್ದ ಕೋರ್ಟ್, ಮೇ 8ರಂದು ಕೋರ್ಟ್ನಲ್ಲಿ ಹಾಜರಿರುವಂತೆ ಆರೋಪಿಗಳಿಗೆ ಸೂಚಿಸಿತ್ತು. ನ್ಯಾಯಾಧೀಶರಾದ ಎ.ಕೆ.ಲಾಹೋಟಿ ಅವರು, ತೀರ್ಪು ಪ್ರಕಟಿಸಲು ಹೆಚ್ಚಿನ ಸಮಯ ಬೇಕು. ಜುಲೈ 31ರಂದು ಎಲ್ಲಾ ಆರೋಪಿಗಳು ಹಾಜರಿರಬೇಕು’ ಎಂದು ಆರೋಪಿಗಳಿಗೆ ತಿಳಿಸಿದ್ದರು.
ಈ ಪ್ರಕರಣದಲ್ಲಿ ಮುಂಬೈನ ವಿಶೇಷ ಎನ್ಐಎ ನ್ಯಾಯಾಲಯವು ಮಾಜಿ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಮತ್ತು ಮಾಜಿ ಸೇನಾ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಶ್ರೀಕಾಂತ್ ಪುರೋಹಿತ್ ಸೇರಿದಂತೆ ಎಲ್ಲಾ ಏಳು ಮಂದಿ ಆರೋಪಿಗಳನ್ನು ಸೂಕ್ತ ಸಾಕ್ಷ್ಯಾಧಾರಗಳು ಇಲ್ಲದ ಕಾರಣ ನಿರಪರಾಧಿ ಎಂದು ಘೋಷಿಸಿದೆ.