ಮಿಥಾಲಿ ಹೋರಾಟ ವ್ಯರ್ಥ

Date:

ಲಕ್ನೋ: ನಾಯಕಿ ಮಿಥಾಲಿ ರಾಜ್ ಅವರ ಅರ್ಧ ಶತಕದ ಹೋರಾಟದ ಹೊರತಾಗಿಯೂ ದಕ್ಷಿಣ ಆಫ್ರಿಕಾ ವನಿತೆಯರ ವಿರುದ್ಧದ 5ನೇ ಏಕದಿನ ಪಂದ್ಯದಲ್ಲಿ 5 ವಿಕೆಟ್ ಸೋಲಿನೊಂದಿಗೆ ಭಾರತದ ವನಿತೆಯರು ಸತತ 3ನೇ ಸೋಲು ಕಂಡಿದ್ದಾರೆ. ಇದರೊಂದಿಗೆ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 4-1 ಹಿನ್ನಡೆ ಅನುಭವಿಸಿದೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತದ ವನಿತಾ ತಂಡ, ಪ್ರಿಯಾ ಪೂನಿಯಾ 18, ಸ್ಮೃತಿ ಮಂಧಾನ 18, ಪೂನಂ ರಾವತ್ 10, ಹರ್ಮನ್‌ಪ್ರೀತ್ ಕೌರ್ (ಗಾಯಾಳಾಗಿ ಹೊರಗೆ) 30, ಮಿಥಾಲಿ ರಾಜ್ ಅಜೇಯ 79, ಜೂಲನ್ ಗೋಸ್ವಾಮಿ 5, ಮೋನಿಕಾ ಪಾಟೆಲ್ 9 ರನ್‌ನೊಂದಿಗೆ 49.3 ಓವರ್‌ಗೆ 9 ವಿಕೆಟ್ ಕಳೆದು 188 ರನ್ ಗಳಿಸಿತು.

ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ವನಿತಾ ತಂಡ, ನಾಯಕಿ ಸೂನೆ ಲೂಸ್ 10, ಮಿಗ್ನಾನ್ ಡು ಪ್ರೀಜ್ 57, ಆನ್ ಬಾಷ್ 58, ಮಾರಿಜನ್ನೆ ಕಾಪ್ 36, ನಾಡಿನ್ ಡಿ ಕ್ಲರ್ಕ್ 19 ರನ್‌ ಕೊಡುಗೆಯೊಂದಿಗೆ 48.2 ಓವರ್‌ನಲ್ಲಿ 5 ವಿಕೆಟ್ ನಷ್ಟದಲ್ಲಿ 189 ರನ್ ಗಳಿಸಿ ಗೆಲುವನ್ನಾಚರಿಸಿತು.

ಭಾರತದ ಮಹಿಳಾ ತಂಡದ ಇನ್ನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ವನಿತಾ ತಂಡದ ನಾಡಿನ್ ಡಿ ಕ್ಲಾರ್ಕ್ 3, ಮಾರಿಜನ್ನೆ ಕಾಪ್ 1, ನೊಂಡುಮಿಸೊ ಶಾಂಗೇಸ್ 2, ತುಮಿ ಸೆಖುಖುನೆ 2 ವಿಕೆಟ್‌ನೊಂದಿಗೆ ಗಮನ ಸೆಳೆದರೆ, ದಕ್ಷಿಣ ಆಫ್ರಿಕಾ ಇನ್ನಿಂಗ್ಸ್‌ನಲ್ಲಿ ಭಾರತದ ರಾಜೇಶ್ವರಿ ಗಾಯಕ್ವಾಡ್ 3 ವಿಕೆಟ್‌ ಪಡೆದರು.

 

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...