ಮೀಟರ್’ ಆಫ್ ಆಗೋ ಮ್ಯಾಟರ್ – ರಾಜ್ಯದಲ್ಲಿ ಏರಿಕೆ ಆಗುತ್ತಂತೆ ವಿದ್ಯುತ್ ದರ

Date:

ಬೆಂಗಳೂರು:- ವಿದ್ಯುತ್ ದರ ಹೆಚ್ಚಳ ಮಾಡುವ ಮೂಲಕ ರಾಜ್ಯದ ಸರ್ಕಾರ ಜನರ ಹೊಟ್ಟೆ ಮೇಳೆ ಬರೆ ಎಳೆದಿದೆ. ಡಿಸೆಂಬರ್ ವಿದ್ಯುತ್ ಬಿಲ್‌ನಲ್ಲಿ ಯೂನಿಟ್‌ಗೆ 85 ಪೈಸೆ ಹೆಚ್ಚುವರಿ ಶುಲ್ಕ, ಇಂಧನ ವೆಚ್ಚ ಹೊಂದಾಣಿಕೆ ಶುಲ್ಕ 35 ಪೈಸೆ ವಿಧಿಸಲು ಸರ್ಕಾರ ಮುಂದಾಗಿದ್ದು, ಈ ಮೂಲಕ ರಾಜ್ಯದ ಜನತೆಗೆ ಮತ್ತೊಂದು ಶಾಕ್ ನೀಡಿದೆ.

ಕಳೆದ ಜೂನ್ ತಿಂಗಳಿನಲ್ಲಿ ಅಕ್ಟೋಬರ್‌ ತಿಂಗಳಿನಿಂದ ಡಿಸೆಂಬರ್‌ವರೆಗೆ ಅನ್ವಯವಾಗುವಂತೆ ಪ್ರತಿ ಯೂನಿಟ್‌ಗೆ ದರ ಹೆಚ್ಚಳ ಮಾಡಲಾಗಿದ್ದ, 50 ಪೈಸೆ ಶುಲ್ಕದೊಂದಿಗೆ ನವೆಂಬರ್ ತಿಂಗಳಿಗೆ ಸೀಮಿತವಾಗಿ 35 ಪೈಸೆ ಹೆಚ್ಚುವರಿ ಶುಲ್ಕ ವಿಧಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಕಾಂಗ್ರೆಸ್‌ ಸರ್ಕಾರ “ಗೃಹಜ್ಯೋತಿ” ಯೋಜನೆಯಡಿ ಪ್ರತಿ ಮನೆಗೂ ಉಚಿತವಾಗಿ 200 ಯೂನಿಟ್‌ ಉಚಿತ ವಿದ್ಯುತ್‌ ನೀಡುತ್ತಿದ್ದು, ಇದರ ಮೇಲೆ ಬಳಸುವವರು ವಿದ್ಯುತ್‌ ಬಿಲ್‌ ಕಟ್ಟಬೇಕು ಎಂದು ತಿಳಿಸಿತ್ತು. ಇದೀಗ ವಿದ್ಯುತ್ ದರ ಏರಿಕೆ ಮಾಡಿ ಜನರ ಕೆಂಗಣ್ಣಿಗೆ ಗುರಿಯಾಗಿದೆ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ವ್ಯಾಪ್ತಿಯ ವಿದ್ಯುತ್ ಗ್ರಾಹಕರಿಗೆ ವಿದ್ಯುತ್ ಶುಲ್ಕದ ಜೊತೆಗೆ ಡಿಸೆಂಬರ್ ಬಿಲ್‌ನಲ್ಲಿ ಬರುವಂತೆ ನವೆಂಬರ್ ತಿಂಗಳ ಬಳಕೆಯ ವಿದ್ಯುತ್ ಮೇಲೆ ಪ್ರತಿ ಯೂನಿಟ್‌ಗೆ 85 ಪೈಸೆ ಹೆಚ್ಚುವರಿ ಆಗಿ ಇಂಧನ ಹೊಂದಾಣಿಕೆ ವೆಚ್ಚ ನಿಗದಿ ಮಾಡಿ ಆದೇಶ ಹೊರಡಿಸಲಾಗಿದೆ.

ಆದ್ದರಿಂದ ಪ್ರತಿ ಯೂನಿಟ್‌ಗೆ ಹೆಚ್ಚುವರಿಯಾಗಿ 85 ಪೈಸೆ ಶುಲ್ಕ ನವೆಂಬರ್ ತಿಂಗಳ ವಿದ್ಯುತ್ ಬಳಕೆಗೆ ವಸೂಲಿ ಮಾಡಲಾಗುವುದು. ಅಕ್ಟೋಬರ್ ತಿಂಗಳ ಬಳಕೆಗೆ 1.01 ರೂಪಾಯಿ ನಿಗದಿ ಮಾಡಲಾಗಿ

Share post:

Subscribe

spot_imgspot_img

Popular

More like this
Related

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ಮಂಗಳೂರು:...

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ದಾಳಿ!

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ...

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ...

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ!

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ! ಬೆಂಗಳೂರು:...