ರಾಜ್ಯದಲ್ಲಿ ಮುಂಗಾರು ಆಗಮನಕ್ಕೆ ಕ್ಷಣಗಣನೆ ಆರಂಭವಾಗಿದೆ, ರಾಜ್ಯದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಜೂನ್ 6 ಅಥವಾ 7 ರಂದು ಮುಂಗಾರು ರಾಜ್ಯವನ್ನು ಪ್ರವೇಶಿಸಲಿದೆ ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು, ಶಿವಮೊಗ್ಗ ಸೇರಿ ವಿವಿಧೆಡೆ ಮಳೆಯಾಗಲಿದೆ.
ಈ ಬಾರಿ ಸ್ವಲ್ಪ ತಡವಾಗಿ ಮುಂಗಾರು ಮಳೆ ಕರ್ನಾಟಕ ಪ್ರವೇಶ ಮಾಡಲಿದೆ.ಮುಂದಿನ ವಾರ ರಾಜ್ಯದಲ್ಲಿ ಮುಂಗಾರು ಮಳೆಯ ಸಿಂಚನ ಆರಂಭವಾಗಲಿದೆ. ಈ ವರ್ಷ ಹೆಚ್ಚು ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ.
ಜೂನ್ ತಿಂಗಳ ಮಧ್ಯಭಾಗದಿಂದ ಆಚೆಗೆ ಮುಂಗಾರು ಮಳೆಯ ಪ್ರಭಾವ ಹೆಚ್ಚಾಗುವ ಸಾಧ್ಯತೆ ಇದೆ. ಜೂನ್ ತಿಂಗಳ ಮೂರನೇ ವಾರದಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಜೂನ್ ತಿಂಗಳ ಮೊದಲ ಎರಡು ವಾರಗಳಲ್ಲಿ ಮುಂಗಾರು ಮಳೆಯ ಪ್ರಭಾವ ಕಡಿಮೆ ಇರುತ್ತದೆ.
ಜೂನ್ ಮೊದಲಾರ್ಧದಲ್ಲಿ ಮುಂಗಾರು ನಿಧಾನಗತಿಯಲ್ಲಿ ಇರುತ್ತದೆ. ಕಳೆದ ತಿಂಗಳು ಮೇ 21 ಮತ್ತು 27ರ ನಡುವೆ ಎರಡು ಚಂಡಮಾರುತಗಳು ಅಬ್ಬರಿಸಿದ್ದವು. ತುಕ್ತೆ ಮತ್ತು ಯಾಸ್ ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೂ ಬೀರಿತ್ತು. ಇದರ ಪರಿಣಾಮವಾಗಿ ಮೇ 31 ರಿಂದ ಜೂನ್ 3ರ ನಡುವೆ ಕೇರಳಕ್ಕೆ ಮುಂಗಾರು ಮಳೆ ಪ್ರವೇಶ ಆಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ನಿರೀಕ್ಷಿಸಿತು. ಅದೇ ರೀತಿಯಾಗಿ ನಿನ್ನೆ ಕೇರಳಕ್ಕೆ ಮುಂಗಾರು ಮಳೆ ಕಾಲಿಟ್ಟಿದೆ.