No menu items!
17.2 C
Munich
Wednesday, May 20, 2026

ಮುಂದಿನ ಆಯವ್ಯಯದಲ್ಲಿ ಯಲ್ಲಾಪುರದಲ್ಲಿ ವಸತಿ ನಿಲಯ ನಿರ್ಮಾಣ: ಸಿದ್ದರಾಮಯ್ಯ ಭರವಸೆ

Must read

ಮುಂದಿನ ಆಯವ್ಯಯದಲ್ಲಿ ಯಲ್ಲಾಪುರದಲ್ಲಿ ವಸತಿ ನಿಲಯ ನಿರ್ಮಾಣ: ಸಿದ್ದರಾಮಯ್ಯ ಭರವಸೆ

ಬೆಳಗಾವಿ: ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ವಸತಿ ನಿಲಯ ನಿರ್ಮಿಸುವ ಬಗ್ಗೆ ಮುಂದಿನ ಆಯವ್ಯಯದಲ್ಲಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಬುಡ್ನ ಸಿದ್ದಿ ರವರ ಚುಕ್ಕೆ ಗುರುತಿನ ಪ್ರಶ್ನೆ 621ಗೆ ಉತ್ತರಿಸಿದರು.

ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ಭಾಗದ ಹಿಂದುಳಿದ ವರ್ಗ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಸತಿನಿಲಯಗಳನ್ನು ನಿರ್ಮಿಸುವ ಅಗತ್ಯತೆಯನ್ನು ತಿಳಿಸಿ, ಈ ಬಗ್ಗೆ ಮಾಹಿತಿ ಕೋರಿದರು.

ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ಭಾಗದ ಹಿಂದುಳಿದ ವರ್ಗ ಮತ್ತು ಪರಿಶಿಷ್ಟ ವರ್ಗಕ್ಕೆ ಸೇರಿದ ವಿವಿಧ ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವಂತೆ ಯಲ್ಲಾಪುರದಲ್ಲಿ ವಸತಿ ನಿಲಯವನ್ನು ನಿರ್ಮಿಸಲು, ಮುಂದಿನ ಆಯವ್ಯಯದಲ್ಲಿ ಒಳಪಡಿಸಲು ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.

- Advertisement -spot_img

More articles

- Advertisement -spot_img

Latest article