ನಿನ್ನೆ ಜೆಡಿಎಸ್ ವಿಧಾನಪರಿಷತ್ ಸದಸ್ಯರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಸಮಾಲೋಚನೆ ನಡೆಸಿದ ದೇವೇಗೌಡರು ಇನ್ನು 2 ತಿಂಗಳಲ್ಲಿ ಪಕ್ಷ ಅಧಿಕಾರಕ್ಕೆ ಬರಲಿದೆ ಯಾರೂ ತಲೆಕೆಡಿಸಿಕೊಳ್ಳಬೇಡಿ ಎಂದು ಭರವಸೆ ನೀಡಿದ್ದಾರೆ. ಮುಂದಿನ ಎರಡು ಮೂರು ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದ ದೇವೇಗೌಡ ಅವರು ವಿಧಾನಪರಿಷತ್ ಸದಸ್ಯರ ಭಿನ್ನಮತ ಶಮನಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.
ಅತೃಪ್ತ ವಿಧಾನಪರಿಷತ್ ಸದಸ್ಯರನ್ನು ಮನೆಗೆ ಕರೆಸಿಕೊಂಡು ಚರ್ಚೆ ನಡೆಸಿ ನಿಮಗಾದ ನೋವು ನನ್ನ ಗಮನಕ್ಕೆ ಬಂದಿದೆ. ನಮ್ಮಿಂದ ತಪ್ಪಾಗಿದೆ ಎಂದು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ ಇದರಿಂದಾಗಿ ರಾಜಕೀಯ ವಲಯದಲ್ಲಿ ಸಂಚಲವನ್ನೇ ಮೂಡಿಸಿದೆ ಈ ಹೇಳಿಕೆ ಮುಂದೆ ದೇವೇಗೌಡ ಅವರ ನಡೆ ಏನು ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡ್ತಾ ಇದೆ .