ಮುಂದಿನ ಚುನಾವಣೆವರೆಗೂ ಬೊಮ್ಮಾಯಿ ಸಿಎಂ ಫಿಕ್ಸ್!

0
295

“ಕರ್ನಾಟಕದಲ್ಲಿ 2023ರ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಎದುರಿಸಲಾಗುವುದು. ಈ ಮೂಲಕ ಮತ್ತೆ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ,” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.

ದಾವಣಗೆರೆ ನಗರದ ಜಿಎಂಐಟಿಯಲ್ಲಿ ಗಾಂಧಿಭವನ, ಕೊಂಡಜ್ಜಿಯ ಪಬ್ಲಿಕ್ ಶಾಲೆಯ ಉದ್ಘಾಟನೆಯನ್ನು ಬಟನ್ ಒತ್ತುವ ಮೂಲಕ‌ ನೆರವೇರಿಸಿ ಮಾತನಾಡಿದ ಅಮಿತ್ ಶಾ, “ಬಿ.ಎಸ್. ಯಡಿಯೂರಪ್ಪ ಸ್ವಯಂ ನಿರ್ಧಾರ ತೆಗೆದುಕೊಂಡು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು‌. ಬಳಿಕ ಬಸವರಾಜ ಬೊಮ್ಮಾಯಿ ಸಿಎಂ ಆದರು. ಈಗ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ವೈಯಕ್ತಿಕ ಹಾಗೂ ರಾಜಕೀಯವಾಗಿ ಉತ್ತಮ ನಡವಳಿಕೆ, ಹೆಸರು ಹೊಂದಿರುವ ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆಯನ್ನು ಬಿಜೆಪಿ ಕರ್ನಾಟಕದಲ್ಲಿ ಎದುರಿಸಲಿದೆ,” ಎಂದು ಘೋಷಿಸಿದರು