ಮುಂದಿನ ವರ್ಷದಿಂದ SSLC ಗ್ರೇಸ್ ಮಾರ್ಕ್ಸ್ ಇರಲ್ಲ: ಮಧು ಬಂಗಾರಪ್ಪ

Date:

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಸಲ ಗ್ರೇಸ್ ಮಾರ್ಕ್ಸ್ ಹೆಚ್ಚಿಸಿದ ವಿಚಾರದ ಬಗ್ಗೆ ವಿಧಾನಸೌದದಲ್ಲಿ ಸಿಎಂ ಚರ್ಚೆ ಮಾಡಿದ್ದಾರೆ. ಗ್ರೇಸ್ ಮಾರ್ಕ್ಸ್ ಹೆಚ್ಚಳಕ್ಕೆ ಶಿಕ್ಷಣ ತಜ್ಞರು ಸೇರಿ ಹಲವರಿಂದ ವಿರೋಧ ಬಗ್ಗೆ ಚರ್ಚೆ ಆಗಿದೆ.ಶಿಕ್ಷಣ ಇಲಾಖೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-1ರಲ್ಲಿ ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ಕೊಡಲಾಗಿತ್ತು. ಈ ಮೂಲಕ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿತ್ತು. ಇದಕ್ಕೆ ಆಕ್ಷೇಪ ವ್ಯಕ್ತವಾದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನಿರ್ಧಾರವನ್ನು ಹಿಂಪಡೆದಿದೆ.
ಇನ್ನು ಸಭೆಯ ನಂತರ ಸಮಜಾಯಿಷಿ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಈಗ ಕೊಟ್ಟಿರುವ ಗ್ರೇಸ್ ಮಾರ್ಕ್ಸ್ನಲ್ಲಿ ಯಾವುದೇ ಬದಲಾವಣೆ ಇಲ್ಲ. ಆದ್ರೆ ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ ..ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೇರ್ಗಡೆಗೆ ಕನಿಷ್ಠ ಅಂಕವನ್ನು 35ರಿಂದ 25ಕ್ಕೆ ಶಿಕ್ಷಣ ಇಲಾಖೆ ಇಳಿಸಿತ್ತು. ಆದಾಗ್ಯೂ ಫಲಿತಾಂಶದ ಪ್ರಮಾಣ ಇಳಿಕೆಯಾಗಿರುವುದು ಕಳವಳಕ್ಕೆ ಕಾರಣವಾಗಿದೆ.
ಈ ಬಾರಿ 1.70 ಲಕ್ಷ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ ನೀಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿತ್ತು. ಒಂದು ವೇಳೆ ಗ್ರೇಸ್ ಮಾರ್ಕ್ ನೀಡದಿದ್ದರೆ ಇಷ್ಟೂ ವಿದ್ಯಾರ್ಥಿಗಳು ಅನುತ್ತೀರ್ಣಗೊಂಡು ಫಲಿತಾಂಶ ಪ್ರಮಾಣ ಇನ್ನಷ್ಟು ಕುಸಿಯುತ್ತಿತ್ತು ಎನ್ನಲಾಗಿದೆ. ಇನ್ನು ಸರ್ಕಾರ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ರದ್ಧು ಮಾಡಲು ತಿಳಿಸಿದರು.

Share post:

Subscribe

spot_imgspot_img

Popular

More like this
Related

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ ಜನಾಶೀರ್ವಾದ: ಬೊಮ್ಮಾಯಿ

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ...

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಮತ್ತೊಮ್ಮೆ...

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ ಮಹಿಳೆಯರ...

ನನಗೆ ಈಗಲೇ ಅಧಿಕಾರ ಬೇಕು ಅಂತ ಇಲ್ಲ, ಪಕ್ಷಕ್ಕಾಗಿ ದುಡಿಯುತ್ತೇನೆ: ನಿಖಿಲ್ ಕುಮಾರಸ್ವಾಮಿ

ನನಗೆ ಈಗಲೇ ಅಧಿಕಾರ ಬೇಕು ಅಂತ ಇಲ್ಲ, ಪಕ್ಷಕ್ಕಾಗಿ ದುಡಿಯುತ್ತೇನೆ: ನಿಖಿಲ್...